ಫೆ.24-25ರಂದು ಟ್ರಂಪ್ ಭಾರತ ಪ್ರವಾಸ : ವ್ಯಾಪಾರ, ರಕ್ಷಣಾ ಒಪ್ಪಂದಕ್ಕೆ ಸಹಿ
Team Udayavani, Feb 11, 2020, 8:49 PM IST
ಹೊಸದಿಲ್ಲಿ/ ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬಹುನಿರೀಕ್ಷಿತ ಭಾರತ ಪ್ರವಾಸದ ದಿನಾಂಕ ನಿಗದಿಯಾಗಿದೆ. ಇದೇ 23 ಮತ್ತು 24ರಂದು ಅಧ್ಯಕ್ಷ ದಂಪತಿ ಭಾರತದಲ್ಲಿ ಇರಲಿದ್ದಾರೆ. ಈ ಬಗ್ಗೆ ಶ್ವೇತಭವನವೇ ಮಾಹಿತಿ ನೀಡಿದೆ.
ಹೊಸದಿಲ್ಲಿ ಮತ್ತು ಅಹಮದಾಬಾದ್ಗಳಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮಗಳಲ್ಲಿ ಟ್ರಂಪ್ ಭಾಗವಹಿಸಲಿದ್ದಾರೆ. ಈ ಪ್ರವಾಸದ ವೇಳೆ ಎರಡೂ ದೇಶಗಳಿಗೆ ಬಹು ಮುಖ್ಯವಾಗಿರುವ ವ್ಯಾಪಾರ ಒಪ್ಪಂದ ಅನುಮೋದನೆಗೊಳ್ಳಲಿದೆ. ಅಮೆರಿಕ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ 2010, 2015ರಲ್ಲಿ ಭಾರತ ಪ್ರವಾಸ ಕೈಗೊಂಡಿದ್ದರು. ಅಹಮದಾಬಾದ್ನಲ್ಲಿ ಹೌಡಿ ಮೋದಿ ಮಾದರಿಯಲ್ಲಿಯೇ ಆಯೋಜಿಸಲಾಗುವ ಕಾರ್ಯಕ್ರಮದಲ್ಲಿ ಟ್ರಂಪ್ ಭಾಗವಹಿಸಲಿದ್ದಾರೆ.
18,000 ಕೋಟಿ ರೂ. ಒಪ್ಪಂದಕ್ಕೆ ಭಾರತ ಸಜ್ಜು?
ಟ್ರಂಪ್ ಭಾರತ ಭೇಟಿಯ ದಿನಗಳು ಹತ್ತಿರವಾಗುತ್ತಿದ್ದಂತೆ ಎರಡೂ ದೇಶಗಳ ನಡುವಿನ ವ್ಯಾವಹಾರಿಕ ಸಂಬಂಧವನ್ನು ಮತ್ತಷ್ಟು ಬಿಗಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹೆಜ್ಜೆಯಿಟ್ಟಿದೆ. ಅಮೆರಿಕದ ಲಾಕ್ಹೀಡ್ ಮಾರ್ಟಿನ್ ಕಂಪೆನಿಯೊಂದಿಗೆ ಭಾರತ ಮಾಡಿಕೊಳ್ಳಲು ಉದ್ದೇಶಿಸಿರುವ 18,000 ಕೋ.ರೂ.ಗಳ ಮೊತ್ತದ 24 ಎಂ.ಎಚ್ ಮಾದರಿಯ ಸೇನಾ ಹೆಲಿಕಾಪ್ಟರ್ಗಳ ಖರೀದಿ ಒಪ್ಪಂದಕ್ಕೆ ಅಂತಿಮ ಸ್ಪರ್ಶ ನೀಡುವಲ್ಲಿ ಕೇಂದ್ರ ಸರಕಾರ ನಿರತವಾಗಿದೆ. ಈ ಮೂಲಕ ನೆರೆ ರಾಷ್ಟ್ರ ಚೀನಕ್ಕೆ ಸೆಡ್ಡು ಹೊಡೆಯುವ ಇರಾದೆಯೂ ಭಾರತಕ್ಕಿದೆ ಎಂದು ಮೂಲಗಳು ತಿಳಿಸಿವೆ.
ಅಮೆರಿಕದಿಂದ ಭಾರತ ಕೊಳ್ಳುತ್ತಿರುವ ರಕ್ಷಣ ಸಾಮಗ್ರಿಗಳ ವ್ಯವಹಾರ 2007ರಿಂದ ಇಲ್ಲಿಯ ವರೆಗೆ 1 ಲಕ್ಷ ಕೋಟಿ ರೂ.ಗಳ ಗೆರೆಯನ್ನು ದಾಟಿದ್ದು, ಹೊಸ ಒಪ್ಪಂದವು ಈ ವ್ಯವಹಾರಕ್ಕೆ ಮತ್ತಷ್ಟು ಶಕ್ತಿ ತುಂಬಲಿರುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್ನಲ್ಲಿ ಬಂಧನ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.