ಚುನಾವಣೆ ಬಳಿಕ ವ್ಯಾಪಾರ ಒಪ್ಪಂದಕ್ಕೆ ಸಹಿ?
Team Udayavani, Feb 19, 2020, 7:20 AM IST
ಹೊಸದಿಲ್ಲಿ/ಅಹಮದಾಬಾದ್: ಬಹು ನಿರೀಕ್ಷಿತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಪ್ರವಾಸದ ವೇಳೆ ಬಹುಕೋಟಿ ಮೌಲ್ಯದ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತದೆ. ವರ್ಷಾಂತ್ಯದಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆ ಮುಕ್ತಾಯದ ಬಳಿಕ ಮತ್ತು ಅದಕ್ಕೆ ಸಂಬಂಧಿಸಿದ ಪೂರ್ವ ಭಾವಿ ಮಾತು ಕತೆಗಳು ಪೂರ್ತಿಯಾದ ಬಳಿಕ ವ್ಯಾಪಾರ ಒಪ್ಪಂದ ಕೈಗೆತ್ತಿಕೊಳ್ಳುವ ಸಾಧ್ಯತೆ ಗಳು ಇವೆ ಎಂದು ಮೂಲಗಳನ್ನು ಉಲ್ಲೇಖೀಸಿ “ದ ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.
ಈ ಬಗ್ಗೆ ಅಮೆರಿಕದ ವಾಣಿಜ್ಯ ಸಚಿವಾಲಯದ ಪ್ರತಿನಿಧಿ ರಾಬರ್ಟ್ ಲೈಟ್ಜರ್ ಕೇಂದ್ರ ಸರಕಾರಕ್ಕೆ ವಿವರಿಸಿದ್ದಾರೆ. ವರ್ಷಾಂತ್ಯದಲ್ಲಿ ಫಲಿತಾಂಶ ಪ್ರಕಟವಾದ ಬಳಿಕ 2021ರ ಆರಂಭದಿಂದ ವ್ಯಾಪಾರ ಒಪ್ಪಂದದ ಬಗ್ಗೆ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರಕಾರ ಅಮೆರಿಕ ನಮ್ಮ ಸಹನೆಯನ್ನು ಪರೀಕ್ಷಿಸುವಂತಿದೆ. ಶೀಘ್ರದಲ್ಲಿಯೇ ಒಪ್ಪಂದ ಪೂರ್ವ ಮಾತುಕತೆ ಗಳನ್ನು ಮುಗಿಸಲು ಉತ್ಸುಕರಾಗಿದ್ದೇವೆ ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ.
ನೋಟಿಸ್ ಜಾರಿ: ಮತ್ತೂಂದು ಮಹತ್ವದ ಬೆಳವಣಿಗೆಯಲ್ಲಿ ಫೆ.24ರಂದು ಏರ್‌ಪೋರ್ಟ್‌ನಿಂದ ಟ್ರಂಪ್ ಆಗಮಿಸುವ ಹೆದ್ದಾರಿ ಬಳಿ ಇರುವ ಕೊಳೆಗೇರಿ ನಿವಾಸಿಗಳಿಗೆ ತೆರವು ನೋಟಿಸ್ ನೀಡಲಾಗಿದೆ. ಈ ಅಂಶ ವಿವಾದಕ್ಕೆ ಕಾರಣವಾಗಿದೆ. ಭೇಟಿಗೂ ನೋಟಿಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಅಹಮದಾಬಾದ್ ಮುನಿಸಿಪಲ್ ಕಾರ್ಪೊರೇಷನ್ ಹೇಳಿಕೊಂಡಿದೆ. ಸ್ಥಳೀಯ ಆಡಳಿತದ ವತಿಯಿಂದ ಈಗಾಗಲೇ ದೊಡ್ಡಗೋಡೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.