ಅಧ್ಯಕ್ಷರಾಗಿ ಗಂಟೆಯೊಳಗೆ ಒಬಾಮ ಕೇರ್ ಯೋಜನೆಗೆ ಟ್ರಂಪ್ ಎಳ್ಳುನೀರು!
Team Udayavani, Jan 21, 2017, 1:12 PM IST
ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಗಂಟೆಯೊಳಗೆ ತಮ್ಮ ಅಧಿಕಾರವನ್ನು ಚಲಾಯಿಸಿದ್ದಾರೆ…ಹೌದು ಅಧ್ಯಕ್ಷೀಯ ಚುನಾವಣೆ ಸಂದರ್ಭ ನೀಡಿದ್ದ ಆಶ್ವಾಸನೆಯಂತೆ ನಿರ್ಗಮಿತ ಅಧ್ಯಕ್ಷ ಬರಾಕ್ ಒಬಾಮ ಅವರು ತಮ್ಮ ಆಡಳಿತಾವಧಿಯಲ್ಲಿ ಜಾರಿಗೆ ತಂದಿದ್ದ ಒಬಾಮಕೇರ್ ಯೋಜನೆ ರದ್ದುಪಡಿಸುವ ಆದೇಶಕ್ಕೆ ಸಹಿ ಹಾಕಿದ್ದಾರೆ!
ಮಧ್ಯಮ ವರ್ಗದ ಜನರಿಗೆ, ಬಡವರಿಗೆ ತುಂಬಾ ಕಡಿಮೆ ವೆಚ್ಚದಲ್ಲಿ ಆರೋಗ್ಯ ಸೇವೆ ಕಲ್ಪಿಸುವ ಒಬಾಮಾ ಕೇರ್ ಎಂಬ ಹೆಸರಿನಲ್ಲಿ ಬರಾಕ್ ಈ ಜಾರಿಗೆ ತಂದಿದ್ದರು. ಆದರೆ ಅಧ್ಯಕ್ಷೀಯ ಚುನಾವಣೆ ವೇಳೆ ಟ್ರಂಪ್ ಈ ಯೋಜನೆ ರದ್ದುಪಡಿಸುವ ಭರವಸೆ ನೀಡಿದ್ದರು.
ಆರ್ಥಿಕ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಹಿಂದಿನ ಅಧ್ಯಕ್ಷ ಬರಾಕ್ ಒಬಾಮ ಅವರು ಜಾರಿಗೆ ತಂದಿದ್ದ ಹೆಲ್ತ್ ಕೇರ್ ಕಾನೂನಿನ ಒಬಾಮಕೇರ್ ಯೋಜನೆಯನ್ನು ಟ್ರಂಪ್ ರದ್ದುಪಡಿಸಿದ್ದಾರೆ.
45ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಹೊತ್ತಿನಲ್ಲಿ ಟ್ರಂಪ್ ಅವರು ಕೇವಲ ಒಂದು ಪುಟದ ಆದೇಶವನ್ನು ಜಾರಿ ಮಾಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ನನ್ನ ಆಡಳಿತಾವಧಿಯಲ್ಲಿ ಈ ನೀತಿ(ಒಬಾಮಕೇರ್)ಯ ಕಾನೂನನ್ನು ರದ್ದುಪಡಿಸಿರುವುದಾಗಿ ಆದೇಶದಲ್ಲಿ ಟ್ರಂಪ್ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.