ಹರಿದು ಬರುತ್ತಿದೆ ದೇಣಿಗೆಯ ಮಹಾಪೂರ!

ದೇಶಾದ್ಯಂತ ವಿವಿಧ ಸಂಸ್ಥೆಗಳಿಂದ ಕೊಡುಗೆ ಸಲ್ಲಿಕೆ; ಚಿನ್ನ ನೀಡಿದ ಹೈದರಾಬಾದ್‌ ಮಳಿಗೆ

Team Udayavani, Aug 5, 2020, 9:45 AM IST

ಹರಿದು ಬರುತ್ತಿದೆ ದೇಣಿಗೆಯ ಮಹಾಪೂರ!

ಹೊಸದಿಲ್ಲಿಯಲ್ಲಿ ಬಿಜೆಪಿ ಸಂಸದ ಪರ್ವೇಶ್‌ ವರ್ಮಾ ಸಾರ್ವಜನಿಕರಿಗೆ ಹಣತೆ ವಿತರಿಸಿದರು.

ಹೊಸದಿಲ್ಲಿ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಭವ್ಯ ರಾಮ ಮಂದಿರಕ್ಕಾಗಿ ದೇಣಿಗೆಯ ಮಹಾಪೂರವೇ ಹರಿದುಬರುತ್ತಿದೆ. ಸಂತರು, ರಾಜಕಾರಣಿಗಳು, ಉದ್ಯಮಿಗಳು ಮತ್ತು ಭಕ್ತರು ತಮ್ಮ ಕೈಲಾದ ಕೊಡುಗೆಯನ್ನು ನೀಡುತ್ತಿದ್ದಾರೆ.

ಮಧ್ಯಪ್ರದೇಶದ ಚಿತ್ರಕೂಟದಲ್ಲಿ ಆಶ್ರಮ ವನ್ನು ಹೊಂದಿರುವ, ರಾಮಚರಿತಮಾ ನಸದ ಹೆಸರಾಂತ ಕಥಾವಾಚಕರಾದ ಮೊರಾರಿ ಬಾಪು ಅವರು ತಮ್ಮ ವ್ಯಾಸಪೀಠದಿಂದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ 5 ಕೋ. ರೂ.ಗಳ ದೇಣಿಗೆಯನ್ನು ಘೋಷಿಸಿದ್ದಾರೆ.  ಮೊಘಲ್‌ ವಂಶಸ್ಥನೆಂದು ಘೋಷಿಸಿಕೊಂಡಿ ರುವ ಪ್ರಿನ್ಸ್‌ ಯಾಕೂಬ್‌ ಹಬೀಬುದ್ದೀನ್‌ ತುಸೀ ಒಂದು ಕೆ.ಜಿ. ಭಾರದ ಚಿನ್ನದ ಗಟ್ಟಿಯನ್ನು ನೀಡುವುದಾಗಿ ಘೋಷಿಸಿದ್ದಾರೆ. ಇದಲ್ಲದೆ
ಟ್ರಸ್ಟ್‌ನ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ ದಾಸ್‌ ಅವರಿಗೆ 40 ಕೆ.ಜಿ. ತೂಕವಿರುವ ಬೆಳ್ಳಿಯ ಇಟ್ಟಿಗೆಯನ್ನು ಹಸ್ತಾಂತರಿಸಲಾಗಿದ್ದು ಆ. 5ರಂದು ನಡೆಯಲಿರುವ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಈ ಇಟ್ಟಿಗೆಯನ್ನು ಇರಿಸಿ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಲಿರುವರು.

ರಾಜಕಾರಣಿಗಳೂ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ದೇಣಿಗೆಯನ್ನು ನೀಡಲಾ ರಂಭಿಸಿದ್ದಾರೆ. ಉತ್ತರಪ್ರದೇಶದ ಉಪಮುಖ್ಯ ಮಂತ್ರಿ ಕೇಶವಪ್ರಸಾದ್‌ ಮೌರ್ಯ ಅವರು ಇತ್ತೀ ಚೆಗೆ ಅಯೋಧ್ಯೆಗೆ ಭೇಟಿ ನೀಡಿದ್ದ ವೇಳೆ 6.60ಲಕ್ಷ ರೂ. ಗಳ ದೇಣಿಗೆಯನ್ನು ಹಸ್ತಾಂತರಿಸಿದರು.

ಮಾ.25ರಂದು ರಾಮ ಲಲ್ಲಾ ವಿಗ್ರಹವನ್ನು ತಾತ್ಕಾಲಿಕವಾಗಿ ಬೇರೆಡೆಗೆ ಸ್ಥಳಾಂತರಿಸುವ ಸಂದರ್ಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು 11ಲ.ರೂ.ಗಳ ವೈಯಕ್ತಿಕ ದೇಣಿಗೆಯನ್ನು ಹಸ್ತಾಂತರಿಸಿದ್ದರು.

ಪಟ್ನಾದ ಮಹಾವೀರ ಮಂದಿರ ಟ್ರಸ್ಟ್‌ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಒಟ್ಟು 5 ಕಂತುಗಳಲ್ಲಿ 10 ಕೋ. ರೂ.ಗಳ ದೇಣಿಗೆಯನ್ನು ನೀಡುವುದಾಗಿ ಘೋಷಿಸಿದ್ದು ಈ ಪೈಕಿ 2 ಕೋ. ರೂ.ಗಳ ಮೊದಲ ಕಂತನ್ನು ಈಗಾಗಲೇ ಹಸ್ತಾಂತರಿಸಿದೆ. ಉಳಿದ ಕಂತುಗಳನ್ನು ಮುಂದಿನ ವರ್ಷಗಳಲ್ಲಿ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಬೇಡಿಕೆಗೆ ತಕ್ಕಂತೆ ನೀಡುವುದಾಗಿ ತಿಳಿಸಿದೆ.

ಭಕ್ತರು ನಗದು ರೂಪದಲ್ಲಿ ಮಾತ್ರವಲ್ಲದೆ ಚಿನ್ನಾಭರಣಗಳನ್ನೂ ದೇಣಿಗೆಯಾಗಿ ನೀಡಿದ್ದಾರೆ. ಹೈದರಾಬಾದ್‌ ಮೂಲದ ಜುವೆಲ್ಲರ್‌ ಕೆ. ಶ್ರೀನಿವಾಸ್‌ ಅವರು ಒಂದು ಕೆ.ಜಿ. ಭಾರದ ಚಿನ್ನದ ಇಟ್ಟಿಗೆ ಮತ್ತು 5ಕೆ.ಜಿ. ಭಾರದ ಬೆಳ್ಳಿಯ ಇಟ್ಟಿಗೆಯನ್ನು ಟ್ರಸ್ಟ್‌ಗೆ ದೇಣಿಗೆ ನೀಡಿದ್ದಾರೆ. ಚಿನ್ನ-ಬೆಳ್ಳಿ ವ್ಯಾಪಾರಿಗಳ ಸಂಘದ ಉತ್ತರ ಪ್ರದೇಶ ಘಟಕದ ವತಿಯಿಂದ 33ಕೆ.ಜಿ.ತೂಕದ ಬೆಳ್ಳಿ ಇಟ್ಟಿಗೆಯನ್ನು ಟ್ರಸ್ಟ್‌ಗೆ ಹಸ್ತಾಂತರಿಸಲಾಗಿದೆ.

ಏತನ್ಮಧ್ಯೆ ವಿಶ್ವ ಹಿಂದೂ ಪರಿಷತ್‌ ದೇಶಾದ್ಯಂತದ 10 ಕೋಟಿ ಕುಟುಂಬಗಳನ್ನು ಸಂಪರ್ಕಿಸಿ ಒಂದು ರೂ.ನಿಂದ 10 ರೂ.ಗಳವರೆಗೆ ದೇಣಿಗೆ ಸಂಗ್ರಹಿಸುವ ಸಂಕಲ್ಪ ತೊಟ್ಟಿದೆ. ಕಳೆದ ನಾಲ್ಕು ತಿಂಗಳುಗಳ ಅವಧಿಯಲ್ಲಿ ಆನ್‌ಲೈನ್‌ ದೇಣಿಗೆ ಮೂಲಕ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ 6 ಕೋ. ರೂ.ಗಳನ್ನು ಸಂಗ್ರಹಿಸಿದೆ.

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.