ಧನೋವಾ ಹೇಳಿಕೆಗೆ ಬೆದರಿದ ಪಾಕ್
Team Udayavani, Oct 7, 2017, 9:15 AM IST
ವಾಷಿಂಗ್ಟನ್/ಹೊಸದಿಲ್ಲಿ: ಯಾವುದೇ ಕಾರ್ಯಾಚರಣೆಗೂ ಭಾರತ ಸಿದ್ಧ ಎಂಬ ವಾಯುಪಡೆ ಮುಖ್ಯಸ್ಥ ಬಿ.ಎಸ್. ಧನೋವಾ ಹೇಳಿಕೆಯು ಪಾಕಿಸ್ಥಾನಕ್ಕೆ ಸರಿಯಾಗಿಯೇ ನಡುಕ ಹುಟ್ಟಿಸಿದೆ. ಇದರಿಂದ ಇರುಸು ಮುರುಸುಗೊಂಡಿರುವ ಪಾಕಿಸ್ಥಾನವು ಭಾರತಕ್ಕೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ.
ವಾಷಿಂಗ್ಟನ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಪಾಕ್ ವಿದೇಶಾಂಗ ಸಚಿವ ಖ್ವಾಜಾ ಆಸಿಫ್, ‘ಭಾರತವೇನಾದರೂ ನಮ್ಮ ನೆಲದಲ್ಲಿ ಸರ್ಜಿಕಲ್ ದಾಳಿ ನಡೆಸಿದರೆ ಅಥವಾ ನಮ್ಮ ಅಣ್ವಸ್ತ್ರ ಘಟಕಗಳ ಮೇಲೆ ದಾಳಿ ನಡೆಸಿದರೆ, ನಾವು ಸುಮ್ಮನಿರುವುದಿಲ್ಲ. ಅಂಥ ಸಂದರ್ಭದಲ್ಲಿ ಇಸ್ಲಾಮಾಬಾದ್ ಸೈರಣೆ ತೋರುತ್ತದೆ ಎಂದು ಯಾರು ಕೂಡ ನಿರೀಕ್ಷಿಸುವುದು ಬೇಡ’ ಎಂದು ಎಚ್ಚರಿಕೆ ಮಿಶ್ರಿತ ಧ್ವನಿಯಲ್ಲಿ ಹೇಳಿದ್ದಾರೆ. ಇದೇ ವೇಳೆ, ಭಾರತಕ್ಕೆ ಸಂಬಂಧಿಸಿದ ಇತರೆ ಪ್ರಶ್ನೆಗಳಿಗೆ ಉತ್ತರಿಸುತ್ತಾ ಮಾತನಾಡಿದ ಅವರು, “ಎರಡೂ ದೇಶಗಳ ನಡುವಿನ ಸಂಬಂಧವನ್ನು ವೃದ್ಧಿಸಿಕೊಳ್ಳಲು ನಾವು ಬಯಸುತ್ತೇವೆ. ಆದರೆ, ಭಾರತವು ಸರಿಯಾಗಿ ಸ್ಪಂದಿಸುತ್ತಿಲ್ಲ. ಕಾಶ್ಮೀರದಲ್ಲಿನ ಪರಿಸ್ಥಿತಿಯು ಮಾತುಕತೆಗೆ ಅತಿದೊಡ್ಡ ತೊಡಕಾಗಿದೆ,’ ಎಂದಿದ್ದಾರೆ.
ರಸ್ತೆ ನಿರ್ಮಾಣ ಕುರಿತು ವಿವರ ನೀಡಿ: ಇದೇ ವೇಳೆ, ಗಡಿಯಲ್ಲಿ ಚೀನವು 500 ಸೈನಿಕರ ಭದ್ರತೆಯಲ್ಲಿ ರಸ್ತೆ ನಿರ್ಮಾಣ ಕಾರ್ಯ ಮುಂದುವರಿಸಿದೆ ಎಂಬ ವರದಿ ಗಳು ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರು ಪ್ರಧಾನಿ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ಎದೆ ತಟ್ಟಿಕೊಳ್ಳುವ ಮೊದಲು, ಡೋಕ್ಲಾಂನಲ್ಲಿ ಚೀನ ರಸ್ತೆ ನಿರ್ಮಿಸುತ್ತಿರುವ ಕುರಿತು ವಿವರಣೆ ನೀಡಿ ಎಂದಿದ್ದಾರೆ.
ಉಗ್ರರ ವಿರುದ್ಧದ ಹೋರಾಟದಲ್ಲಿ ಸಹಕಾರ
ಇನ್ನೊಂದೆಡೆ, ಹೊಸದಿಲ್ಲಿಯಲ್ಲಿ ಐರೋಪ್ಯ ಒಕ್ಕೂಟದ ಅಧ್ಯಕ್ಷ ಡೊನಾಲ್ಡ್ ಫ್ರಾನ್ಸಿಸ್‌ಝೆಕ್ ಟಸ್ಕ್ ಹಾಗೂ ಐರೋಪ್ಯ ಆಯೋಗದ ಅಧ್ಯಕ್ಷ ಜೀನ್ ಕ್ಲಾಡ್ ಜಂಕರ್ ಶುಕ್ರವಾರ ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಉಗ್ರರ ವಿರುದ್ಧದ ಹೋರಾಟದಲ್ಲಿ ಪರಸ್ಪರ ಸಹಕಾರದ ಕುರಿತು ಒಪ್ಪಂದ ಮಾಡಿಕೊಂಡಿದ್ದಾರೆ. ಉಗ್ರ ಹಫೀಜ್ ಸಯೀದ್, ಮುಂಬಯಿ ದಾಳಿ ಸಂಚುಕೋರ ಲಖ್ವೀ, ದಾವೂದ್ ಇಬ್ರಾಹಿಂ, ಲಷ್ಕರ್, ಜೆಇಎಂ, ಐಸಿಸ್ ಮತ್ತಿತರ ಉಗ್ರರು ಮತ್ತು ಉಗ್ರ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸಹಕಾರ ಮಾಡಿ ಕೊಂಡಿದ್ದೇವೆ ಎಂದು ಟಸ್ಕ್ ತಿಳಿಸಿದ್ದಾರೆ. ಇದೇ ವೇಳೆ, ಅಂತಾರಾಷ್ಟ್ರೀಯ ಸೌರ ಒಪ್ಪಂದ ಸೇರಿದಂತೆ 3 ಪ್ರಮುಖ ಒಪ್ಪಂದಗಳಿಗೆ ಸಹಿಯನ್ನೂ ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.