ಕರ್ನಾಟಕ ಗೆಲುವಿನಿಂದ ಬೀಗಬೇಡಿ: ಪ್ರಶಾಂತ್ ಕಿಶೋರ್ ಎಚ್ಚರಿಕೆ
Team Udayavani, May 18, 2023, 7:22 AM IST
ಪಾಟ್ನಾ: ಖ್ಯಾತ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್, ಕರ್ನಾಟಕ ವಿಧಾನಸಭಾ ಗೆಲುವಿನಿಂದ ಬೀಗುತ್ತಿರುವ ಕಾಂಗ್ರೆಸ್‌ಗೆ ಭಾರೀ ಎಚ್ಚರಿಕೆ ನೀಡಿದ್ದಾರೆ. ಈ ಗೆಲುವು ಮುಂದಿನ ಲೋಕಸಭಾ ಚುನಾವಣೆಯಲ್ಲಿ ದಿಗ್ವಿಜಯದ ಮುನ್ಸೂಚನೆ ಎಂದುಕೊಳ್ಳಬೇಡಿ. 2013ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಿತ್ತು, ಆದರೆ 2014ರ ಲೋಕಸಭಾ ಚುನಾವಣೆಯಲ್ಲಿ ಪೂರ್ಣವಾಗಿ ಮುಗ್ಗರಿಸಿತ್ತು. 2019ರ ಲೋಕಸಭಾ ಚುನಾವಣೆಗೂ ಮುನ್ನ ಮೂರು ಮುಖ್ಯ ರಾಜ್ಯಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತುಹೋಗಿತ್ತು. ಹೀಗಾಗಿ ಫಲಿತಾಂಶವನ್ನು ದಿಗ್ವಿಜಯದ ಮುನ್ಸೂಚನೆ ಎಂಬಂತೆ ಪರಿಗಣಿಸಬಾರದು ಎಂದು ತಿಳಿಸಿದ್ದಾರೆ. ಇದೇ ವೇಳೆ ಕರ್ನಾಟಕದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಕ್ಕೆ ಕಾಂಗ್ರೆಸ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ. ಕೆಲವು ದಿನಗಳ ಹಿಂದೆ ಬಿಹಾರದಲ್ಲಿ ಪಾದಯಾತ್ರೆ ನಡೆಸುತ್ತಿದ್ದ ಅವರು, ಕಾಲಿನ ಮಾಂಸಖಂಡದಲ್ಲಿ ಹರಿತವುಂಟಾಗಿದ್ದರಿಂದ ಅದನ್ನು ನಿಲ್ಲಿಸಿದ್ದಾರೆ. ಈಗವರು ರಹಸ್ಯ ತಾಣವೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
2012ರಲ್ಲಿ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಭರ್ಜರಿ ಜಯ ಗಳಿಸಿತ್ತು. 2014ರಲ್ಲಿ ಲೋಕಸಭೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಉ.ಪ್ರ.ದಲ್ಲಿರುವ 80 ಸ್ಥಾನಗಳ ಪೈಕಿ 73 ಸ್ಥಾನಗಳನ್ನು ಬಿಜೆಪಿಯೇ ಗೆದ್ದುಕೊಂಡಿತ್ತು! 2018ರಲ್ಲಿ ಮಧ್ಯಪ್ರದೇಶ, ಛತ್ತೀಸಗಢ, ರಾಜಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದಿದ್ದರೂ, ನಂತರದ ಲೋಕಸಭಾ ಚುನಾವಣೆಯಲ್ಲಿ ದಯನೀಯ ಸೋಲನುಭವಿಸಿತ್ತು ಎಂಬ ಸಂಗತಿಗಳನ್ನು ಐಪ್ಯಾಕ್ ಸ್ಥಾಪಕ ಪ್ರಶಾಂತ್ ಕಿಶೋರ್ ನೆನಪಿಸಿಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.