Delhi; ‘ನಿಮ್ಮ ಗಂಡ ಮೋದಿ ಜಪ ಮಾಡಿದರೆ ಊಟ ಕೊಡಬೇಡಿ’: ಮಹಿಳೆಯರಿಗೆ ಕೇಜ್ರಿವಾಲ್ ಕರೆ
ಆಪ್ ಗೆ ಮತ ಹಾಕುವಂತೆ ಆಣೆ ಮಾಡಿಸಿದ ದೆಹಲಿ ಸಿಎಂ
Team Udayavani, Mar 10, 2024, 11:18 AM IST
ಹೊಸದಿಲ್ಲಿ: ಮನೆಯಲ್ಲಿ ಗಂಡ ಒಂದು ವೇಳೆ ಮೋದಿ ಮೋದಿ ಎಂದರೆ ಆತನಿಗೆ ಊಟ ನೀಡಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಹಿಳೆಯರಿಗೆ ಹೇಳಿದ್ದಾರೆ.
“ಅನೇಕ ಪುರುಷರು ಪ್ರಧಾನಿ ಮೋದಿಯವರ ಹೆಸರನ್ನು ಜಪಿಸುತ್ತಿದ್ದಾರೆ, ಆದರೆ ನೀವು ಅವರನ್ನು ಸರಿ ಮಾಡಬೇಕು. ನಿಮ್ಮ ಪತಿ ಮೋದಿಯವರ ಹೆಸರನ್ನು ಜಪಿಸಿದರೆ, ನೀವು ಅವರಿಗೆ ರಾತ್ರಿಯ ಊಟವನ್ನು ನೀಡುವುದಿಲ್ಲ ಎಂದು ಹೇಳಿ” ಎಂದು ಕೇಜ್ರಿವಾಲ್ ಅವರು ದೆಹಲಿಯಲ್ಲಿ ‘ಮಹಿಳಾ ಸಮ್ಮಾನ್ ಸಮರೋಹ್’ ಕಾರ್ಯಕ್ರಮವನ್ನು ಉದ್ದೇಶಿಸಿ ಹೇಳಿದರು.
ದೆಹಲಿ ಸರ್ಕಾರವು ತನ್ನ 2024-25 ರ ಬಜೆಟ್ ನಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ಮಾಸಿಕ 1,000 ರೂ. ಮೊತ್ತವನ್ನು ಒದಗಿಸುವ ಯೋಜನೆಯನ್ನು ಘೋಷಿಸಿದ ನಂತರ ಮಹಿಳೆಯರೊಂದಿಗೆ ಸಂವಾದ ನಡೆಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಆಣೆ ಮಾಡಿ: ಮಹಿಳೆಯರು ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವುದಾಗಿ ತಮ್ಮ ಕುಟುಂಬ ಸದಸ್ಯರ ಮೇಲೆ ಪ್ರಮಾಣ ಮಾಡುವಂತೆ ಮಹಿಳೆಯರಿಗೆ ಅರವಿಂದ್ ಕೇಜ್ರಿವಾಲ್ ಅವರು ಹೇಳಿದರು.
ಬಿಜೆಪಿಯನ್ನು ಬೆಂಬಲಿಸುವ ಇತರ ಮಹಿಳೆಯರಿಗೆ ನಿಮ್ಮ ಸಹೋದರ ಕೇಜ್ರಿವಾಲ್ ಮಾತ್ರ ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ ಎಂದು ಹೇಳಬೇಕು ಎಂದು ಕೇಜ್ರಿವಾಲ್ ಮಹಿಳೆಯರಿಗೆ ಕರೆ ನೀಡಿದರು.
“ನಾನು ಅವರ ಕರೆಂಟ್ ಫ್ರೀ ಮಾಡಿದ್ದೇನೆ, ಅವರ ಬಸ್ ಟಿಕೆಟ್ ಉಚಿತ ಮಾಡಿದ್ದೇನೆ ಎಂದು ಹೇಳಿ, ಈಗ ನಾನು ಪ್ರತಿ ತಿಂಗಳು ಮಹಿಳೆಯರಿಗೆ ಈ 1,000 ರೂಗಳನ್ನು ನೀಡುತ್ತಿದ್ದೇನೆ, ಬಿಜೆಪಿ ಅವರಿಗೆ ಏನು ಮಾಡಿದೆ? ಬಿಜೆಪಿಗೆ ಏಕೆ ಮತ ಹಾಕಬೇಕು? ಈ ಬಾರಿ ಕೇಜ್ರಿವಾಲ್ ಗೆ ಮತ ಹಾಕಿ” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.