ನನ್ನಲ್ಲಿಯೇ ಜನನ ಪ್ರಮಾಣಪತ್ರವಿಲ್ಲ, ನನ್ನ ತಂದೆಯ ಪ್ರಮಾಣಪತ್ರವನ್ನು ಹೇಗೆ ತರಲಿ?: ಕೆಸಿಆರ್
Team Udayavani, Mar 8, 2020, 9:47 AM IST
ತೆಲಂಗಾಣ: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ವಿರುದ್ಧ ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಮಧ್ಯೆ, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ತಾನೂ ಜನನ ಪ್ರಮಾಣಪತ್ರವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.
ನನ್ನಲ್ಲಿಯೇ ಜನನ ಪ್ರಮಾಣಪತ್ರವಿಲ್ಲದಿದ್ದಾಗ, ನನ್ನ ತಂದೆಯ ಪ್ರಮಾಣಪತ್ರವನ್ನು ನಾನು ಹೇಗೆ ತರಲಿ ಎಂದು ಅವರು ವಿಧಾನಸಭೆಯಲ್ಲಿ ಪ್ರಶ್ನಿಸಿದ್ದಾರೆ, ಆ ಮೂಲಕ ಏಪ್ರಿಲ್ 1, 2020 ರಿಂದ ಕೇಂದ್ರ ಸರ್ಕಾರವು ಹೊರತರಲು ಯೋಜಿಸುತ್ತಿರುವ ಎನ್ ಪಿಆರ್ ಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಎನ್ ಪಿ ಆರ್ ನನಗೆ ಕಳವಳವನ್ನುಂಟುಮಾಡುತ್ತಿದೆ. ನಾನು ಹುಟ್ಟಿದ್ದು ಹಳ್ಳಿಯ ನನ್ನ ಮನೆಯಲ್ಲಿ. ಆಗ ಯಾವುದೇ ಆಸ್ಪತ್ರೆಗಳು ಇರಲಿಲ್ಲ. ಗ್ರಾಮದ ಹಿರಿಯರು ಯಾವುದೇ ಅಧಿಕೃತ ಮುದ್ರೆಯನ್ನು ಹೊಂದಿರದ ‘ಜನ್ಮ ನಾಮ’ ಬರೆಯುತ್ತಿದ್ದರು. ನಾನು ಜನಿಸಿದಾಗ ನಮಗೆ 580 ಎಕರೆ ಭೂಮಿ ಮತ್ತು ಕಟ್ಟಡವಿತ್ತು. ನನಗೆ ಜನನ ಪ್ರಮಾಣಪತ್ರ ದಾಖಲೆ ಮಾಡಿಸಲು ಸಾಧ್ಯವಾಗದಿದ್ದಾಗ, ದಲಿತರು, ಬುಡಕಟ್ಟು ಜನಾಂಗದವರು ಮತ್ತು ಬಡವರು ಹೇಗೆ ದಾಖಲೆ ಒದಗಿಸುತ್ತಾರೆ ಎಂದು ಕಿಡಿಕಾರಿದ್ದಾರೆ.
ಹೊಸ ಶಾಸನವು ಸಾಂವಿಧಾನಿಕ ವಿರೋಧಿ ಮತ್ತು ಇದು ದೇಶದ ಸಂವಿಧಾನದ ಮೂಲ ತತ್ವಕ್ಕೆ ವಿರುದ್ಧವಾಗಿದೆ .ರಾಜ್ಯ ವಿಧಾನಸಭೆಯಲ್ಲಿ ಸಿಎಎ ಮತ್ತು ಎನ್ ಪಿಆರ್ ಕುರಿತು ಚರ್ಚೆ ನಡೆಯಲಿದ್ದು, ಮುಂದಿನ ದಿನಗಳಲ್ಲಿ ಇಡೀ ದೇಶಕ್ಕೆ ಬಲವಾದ ಸಂದೇಶ ರವಾನಿಸಲು ನಿರ್ಣಯ ಮಂಡಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಇದೇ ವೇಳೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
Maharashtra: ಏಕ್‌ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.