Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
ಹಳೆಯ ಸಂಸತ್ ಭವನದಲ್ಲಿ ಜಂಟಿ ಸದನ ಉದ್ದೇಶಿಸಿ ದ್ರೌಪದಿ ಮುರ್ಮು ಭಾಷಣ
Team Udayavani, Nov 26, 2024, 9:23 PM IST
ನವದೆಹಲಿ: “ಭಾರತದ ಸಂವಿಧಾನವು ಒಂದು ಜೀವಂತಿಕೆಯುಳ್ಳ ಪ್ರಗತಿಪರ ದಾಖಲೆ. ಅದರ ಮೂಲಕವೇ ನಾವು ಸಾಮಾಜಿಕ ನ್ಯಾಯ ಮತ್ತು ಎಲ್ಲರನ್ನೊಳಗೊಂಡ ಅಭಿವೃದ್ಧಿಯನ್ನು ಸಾಧಿಸಿದ್ದೇವೆ. ಸಂವಿಧಾನದ ಆಶಯದಂತೆ ಜನರ ಬದುಕನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಒಗಟ್ಟಾಗಿ ಕೆಲಸ ಮಾಡುವುದು ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಹೊಣೆಗಾರಿಕೆಯಾಗಿದೆ’.
ಹೀಗೆಂದು ಹೇಳಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು. ದೇಶವು ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಒಂದು ವರ್ಷ ಕಾಲ ನಡೆಯಲಿರುವ ವಿವಿಧ ಕಾರ್ಯಕ್ರಮಗಳಿಗೆ ಮಂಗಳವಾರ ಚಾಲನೆ ನೀಡಿದ ಅವರು, ಬಳಿಕ ಹಳೆಯ ಸಂಸತ್ ಭವನದ “ಸಂವಿಧಾನ್ ಸದನ’ದ ಸೆಂಟ್ರಲ್ ಹಾಲ್‌ನಲ್ಲಿ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ, ಸಂವಿಧಾನ ರಚನಾ ಮಂಡಳಿಯಲ್ಲಿದ್ದ 15 ಮಹಿಳಾ ಸದಸ್ಯರ ಕೊಡುಗೆಯನ್ನೂ ಅವರು ಸ್ಮರಿಸಿದರು.
“ನಮ್ಮ ದೂರದೃಷ್ಟಿಯುಳ್ಳ ಸಂವಿಧಾನ ರಚನಾಕಾರರು, ಬದಲಾಗುತ್ತಿರುವ ಕಾಲದ ಅಗತ್ಯಕ್ಕೆ ತಕ್ಕಂತೆ ಹೊಸ ಹೊಸ ಪರಿಕಲ್ಪನೆಗಳನ್ನು ಅಳವಡಿಸುವಂಥ ವ್ಯವಸ್ಥೆಯನ್ನು ನಮಗೆ ನೀಡಿದ್ದಾರೆ. ನಾವು ಈಗಾಗಲೇ ಹಲವು ಮಹತ್ವಾಕಾಂಕ್ಷಿ ಗುರಿಗಳನ್ನು ಸಂವಿಧಾನದ ಮೂಲಕ ಸಾಧಿಸಿದ್ದೇವೆ. ದೇಶಕ್ಕೆ ಹೊಸ ಅಸ್ಮಿತೆಯನ್ನು ಕಂಡುಕೊಂಡಿದ್ದೇವೆ’ ಎಂದು ಮುರ್ಮು ಹೇಳಿದರು.
75 ವರ್ಷಗಳ ಹಿಂದೆ ಇದೇ ದಿನದಂದು, ಸಂವಿಧಾನ ರಚನಾ ಸಮಿತಿಯು ಹೊಸದಾಗಿ ರೂಪುಗೊಂಡ ಸ್ವತಂತ್ರ ಭಾರತಕ್ಕೆ ಸಂವಿಧಾನವನ್ನು ರೂಪಿಸುವ ದೊಡ್ಡಮಟ್ಟದ ಕಾರ್ಯವನ್ನು ಇದೇ ಸೆಂಟ್ರಲ್ ಹಾಲ್‌ನಲ್ಲಿ ಪೂರ್ಣಗೊಳಿಸಿತ್ತು. ಅಂದರೆ, ಭಾರತದ ಸಂವಿಧಾನವು ಅತ್ಯುನ್ನತ ವ್ಯಕ್ತಿಗಳ 3 ವರ್ಷಗಳ ನಿರಂತರ ಸಮಾಲೋಚನೆಯ ಫಲವಾಗಿದೆ. ಎಂದರು.
ಮೈಥಿಲಿ, ಸಂಸ್ಕೃತದಲ್ಲಿ ಸಂವಿಧಾನ ಪ್ರತಿ ಬಿಡುಗಡೆ
ಇದೇ ಸಂದರ್ಭದಲ್ಲಿ ರಾಷ್ಟ್ರಪತಿ ಮುರ್ಮು ಅವರು ಸಂವಿಧಾನದ ಮೈಥಿಲಿ ಹಾಗೂ ಸಂಸ್ಕೃತ ಭಾಷೆಯ ಆವೃತ್ತಿಯನ್ನು ಬಿಡುಗಡೆ ಮಾಡಿದರು. ಜತೆಗೆ, ಸಂವಿಧಾನದ 75ನೇ ವರ್ಷಾಚರಣೆ ಸ್ಮರಣಾರ್ಥ ವಿಶೇಷ ನಾಣ್ಯ ಹಾಗೂ ಅಂಚೆಚೀಟಿಯನ್ನೂ ಬಿಡುಗಡೆಗೊಳಿಸಿದರು.
ಎಸ್ಸಿ, ಎಸ್ಟಿ, ಒಬಿಸಿ ಹಾದಿಯಲ್ಲಿನ ಗೋಡೆಗೆ ಮೋದಿ ಸಿಮೆಂಟ್ ಹಾಕುತ್ತಿದ್ದಾರೆ: ರಾಹುಲ್
ದಲಿತರು, ಆದಿವಾಸಿಗಳು ಹಾಗೂ ಒಬಿಸಿಗಳ ಹಾದಿಯಲ್ಲಿನ ಗೋಡೆಯನ್ನು ಪ್ರಧಾನಿ ಮೋದಿ ಹಾಗೂ ಆರೆಸ್ಸೆಸ್ ಮತ್ತಷ್ಟು ಬಲಪಡಿಸುತ್ತಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನವದೆಹಲಿಯಲ್ಲಿ ನಡೆದ “ಸಂವಿಧಾನ್ ರಕ್ಷಕ್ ಅಭಿಯಾನ’ದಲ್ಲಿ ಮಾತನಾಡಿದ ಅವರು, ಹಿಂದಿನ ಯುಪಿಎ ಸರ್ಕಾರವು ಗ್ರಾಮೀಣ ಉದ್ಯೋಗ ಖಾತ್ರಿ, ಭೂಸ್ವಾಧೀನ ಕಾಯ್ದೆ, ಆಹಾರದ ಹಕ್ಕುಗಳನ್ನು ಒದಗಿಸುವ ಮೂಲಕ ಈ ಗೋಡೆಯನ್ನು ಒಡೆಯಲು ಬಹಳಷ್ಟು ಪ್ರಯತ್ನಿಸಿತು. ಆದರೆ, ಮೋದಿ ಮತ್ತು ಆರೆಸ್ಸೆಸ್ ಈ ಗೋಡೆಗೆ ಮತ್ತಷ್ಟು ಸಿಮೆಂಟ್ ಹಾಕುತ್ತಾ ಅದನ್ನು ಬಲಿಷ್ಠಗೊಳಿಸುತ್ತಿದೆ ಎಂದರು. “ಪ್ರಧಾನಿ ಮೋದಿ ಸಂವಿಧಾನವನ್ನು ಓದಿಲ್ಲ ಎನ್ನುವುದು ಗ್ಯಾರಂಟಿ. ಅವರೇನಾದರೂ ಓದಿದ್ದರೆ, ಅವರು ಪ್ರತಿದಿನ ಈಗ ಏನು ಮಾಡುತ್ತಿದ್ದಾರೋ, ಅದನ್ನು ಮಾಡುತ್ತಿರಲಿಲ್ಲ’ ಎಂದಿದ್ದಾರೆ. ದೇಶದ ಇಡೀ ವ್ಯವಸ್ಥೆಯನ್ನು ದಲಿತರು, ಆದಿವಾಸಿಗಳು, ಹಿಂದುಳಿದವರ ವಿರುದ್ಧ ಛೂಬಿಡಲಾಗಿದೆ ಎಂದೂ ಅವರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.