ನೋಯ್ಡಾ : ಮಹಾ ಪಾತಕಿ ಬಾಲರಾಜ್ ಭಾಟಿ ಎನ್ಕೌಂಟರ್ಗೆ ಬಲಿ
Team Udayavani, Apr 23, 2018, 4:56 PM IST
ನೋಯ್ಡಾ : ಉತ್ತರ ಪ್ರದೇಶ, ದಿಲ್ಲಿ ಮತ್ತು ಹರಿಯಾಣ – ಮೂರು ರಾಜ್ಯಗಳ STF ಪೊಲೀಸರು ಜಂಟಿಯಾಗಿ ನಡೆಸಿದ ಎನ್ಕೌಂಟರ್ನಲ್ಲಿ ಮಹಾ ಪಾತಕಿ ಬಾಲರಾಜ್ ಭಾಟಿ ಇಂದು ಸೋಮವಾರ ಬೆಳಗ್ಗೆ ಹತನಾಗಿದ್ದಾನೆ.
ಈತನ ತಲೆಗೆ ಪೊಲೀಸರು ಈ ಹಿಂದೆ 2.5 ಲಕ್ಷ ರೂ. ಇನಾಮು ಘೋಷಿಸಿದ್ದರು. ಈತನ ಹತ್ಯೆ ಪೊಲೀಸ್ ಪಡೆಗೆ ದೊರಕಿರುವ ಭಾರೀ ಯಶಸ್ಸು ಎಂದು ತಿಳಿಯಲಾಗಿದೆ.
ನೋಯ್ಡಾ ಸೆಕ್ಟರ್ 41ರಲ್ಲಿ ಪಾತಕಿ ಭಾಟಿ ದೊಡ್ಡ ಮಟ್ಟದ ದರೋಡೆಗೆ ಸ್ಕೆಚ್ ಹಾಕಿಕೊಂಡಿದ್ದ ಮಾಹಿತಿ ಪಡೆದಿದ್ದ ಪೊಲೀಸರ ಜಂಟಿ ತಂಡ ಅಲ್ಲಿಗೆ ಧಾವಿಸಿ ಕಟ್ಟೆಚ್ಚರ ಘೋಷಿಸಿ ಎಲ್ಲ ನಿರ್ಗಮನ ಮಾರ್ಗಗಳನ್ನು ಮುಚ್ಚಿದರು. ತನ್ನನ್ನು ಎಲ್ಲ ದಿಕ್ಕುಗಳಿಂದ ಪೊಲೀಸರು ಸುತ್ತುವರಿದಿರುವುದನ್ನು ಅರಿತ ಭಾಟಿ ಮತ್ತು ಆತನ ತಂಡದವರು ಪೊಲೀಸರ ಮೇಲೆ ಗುಂಡಿನ ದಾಳಿಗೆ ಮುಂದಾದರು. ಕೂಡಲೇ ಪೊಲೀಸರು ಗುಂಡಿನ ಉತ್ತರ ನೀಡಿದರು.
ಗುಂಡೇಟಿಗೆ ಗಂಭೀರವಾಗಿ ಗಾಯಗೊಂಡ ಭಾಟಿಯನ್ನು ಜಿಲ್ಲಾ ಆಸ್ಪತ್ರೆಗೆ ಒಯ್ದಾಗ ಆತ ಅದಾಗಲೇ ಮೃತಪಟ್ಟಿದ್ದುದಾಗಿ ವೈದ್ಯರು ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.