![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 23, 2024, 12:03 AM IST
ಹೊಸದಿಲ್ಲಿ: ಕರ್ನಾಟಕಕಕ್ಕೆ ನೀಡಬೇಕಾ ಗಿರುವ ಬರ ಪರಿಹಾರ ಬಿಡುಗಡೆಗೆ ಕೇಂದ್ರ ಚುನಾ ವಣ ಆಯೋಗ ಒಪ್ಪಿಗೆ ಸೂಚಿಸಿದೆ. ಶೀಘ್ರವೇ ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡುವ ಕಾರ್ಯ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ಸೋಮವಾರ ತಿಳಿಸಿದೆ.
ಹೀಗಾಗಿ ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕರ್ನಾಟಕ ಸರಕಾರಕ್ಕೆ ಶೀಘ್ರದಲ್ಲೇ ಪರಿಹಾರದ ಮೊತ್ತ ಲಭ್ಯವಾಗುವ ಭರವಸೆ ಮೂಡಿದೆ.
ಕೇಂದ್ರ ವಿಪತ್ತು ನಿರ್ವಹಣ ನಿಧಿ ಅನ್ವಯ ರಾಜ್ಯಕ್ಕೆ ನೀಡಬೇಕಾದ ಬರ ಪರಿಹಾರವನ್ನು ನೀಡುವಂತೆ ಕೇಂದ್ರಕ್ಕೆ ಸೂಚಿಸಬೇಕು ಎಂದು ಕೋರಿ ಕರ್ನಾಟಕ ಸರಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಕೇಂದ್ರ ಸರಕಾರವು ಶೀಘ್ರ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.
ಕೇಂದ್ರ ಸರಕಾರದ ಪರ ಹಾಜರಾಗಿದ್ದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ, “ಬರ ಪರಿಹಾರ ನೀಡುವುದಕ್ಕೆ ಸಂಬಂಧಿಸಿ ಕೇಂದ್ರ ಚುನಾವಣ ಆಯೋಗ ಒಪ್ಪಿಗೆ ಸೂಚಿಸಿದೆ. ಮುಂದಿನ ಸೋಮವಾರದಿಂದಲೇ ಈ ಕುರಿತ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆಯಿದೆ. ಇದಕ್ಕೆ ಸಂಬಂಧಿಸಿ ಇನ್ನು ವಾದ ಬೇಡ’ ಎಂದರು.
ಕೇಂದ್ರ ಸರಕಾರದ ವಾದ ಆಲಿಸಿದ ನ್ಯಾ|ಬಿ.ಆರ್. ಗವಾಯಿ ಮತ್ತು ನ್ಯಾ| ಸಂದೀಪ್ ಮೆಹ್ತಾ ಅವರಿದ್ದ ನ್ಯಾಯಪೀಠವು ಇದು ಒಕ್ಕೂಟ ವ್ಯವಸ್ಥೆಗೆ ಸಂಬಂಧಿಸಿದ ವಿಷಯವಾಗಿದೆ. ಹೀಗಾಗಿ ಪರಸ್ಪರ ಸಮನ್ವಯ, ಸಹಕಾರದಿಂದ ಇಂಥವುಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಸೂಚಿಸಿತು. ಕರ್ನಾಟಕ ಸರಕಾರದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಯಾವುದೇ ವಿರೋಧ ವ್ಯಕ್ತಪಡಿಸದ ಕಾರಣ ವಿಚಾರಣೆಯನ್ನು ಕೋರ್ಟ್ ಮುಂದೂಡಿತು.
ಏನಿದು ಪರಿಹಾರ ವಿವಾದ?
ಕೇಂದ್ರ ಸರಕಾರ ಬರ ಪರಿಹಾರ ನೀಡಿಲ್ಲ ಎಂದು ಕರ್ನಾಟಕ ಸರಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಬರದಿಂದ ರಾಜ್ಯ ದಲ್ಲಿ 35,162 ಕೋಟಿ ರೂ. ನಷ್ಟವಾಗಿದೆ. ಎನ್‌ಡಿಆರ್‌ಎಫ್ನಡಿ ಕೇಂದ್ರ ಸರಕಾರ 18,171 ಕೋಟಿ ರೂ. ಪರಿಹಾರ ನೀಡಬೇಕು ಎಂದು ಮನವಿ ಮಾಡಿತ್ತು. ಜತೆಗೆ ಕೇಂದ್ರ ತಂಡ ಪರಿಶೀಲನೆ ನಡೆಸಿದೆ ಎಂದು ವಾದಿಸಿತ್ತು. ಮಾ. 8ರಂದು ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವೆ ಸಾಮರಸ್ಯ ಇರಬೇಕು ಎಂದಿತ್ತು. ಕರ್ನಾಟಕದ ಅರ್ಜಿಗೆ ಸಂಬಂಧಿಸಿ 2 ವಾರಗಳಲ್ಲಿ ಉತ್ತರಿಸುವಂತೆ ಕೇಂದ್ರಕ್ಕೆ ಸೂಚಿಸಿತ್ತು.
ಇದು ರಾಜ್ಯ ಸರಕಾರದ ಹೋರಾಟಕ್ಕೆ ಸಂದ ಜಯ. ಬರ ಪರಿಹಾರಕ್ಕಾಗಿ ಮನವಿ ನೀಡಿ 5 ತಿಂಗಳು ಕಳೆದರೂ ಕೇಂದ್ರದ ಬಿಜೆಪಿ ಸರಕಾರವು ನಿರ್ಣಯ ಕೈಗೊಳ್ಳದೆ ಕೋರ್ಟ್ ಮೆಟ್ಟಿಲೇ ರುವ ಅನಿವಾರ್ಯ ಸೃಷ್ಟಿಸಿತ್ತು. ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರ ವನ್ನು ಕೊಡಿಸುವ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯವಿದು.
-ಸಿದ್ದರಾಮಯ್ಯ, ಮುಖ್ಯಮಂತ್ರಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.