ನಾಳೆ ದ್ರೌಪದಿ ಮುರ್ಮು ಪ್ರಮಾಣ ವಚನ; 21 ಗನ್ ಸೆಲ್ಯೂಟ್
ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಬುಡಕಟ್ಟು ಸಮುದಾಯದ ಮಹಿಳೆ
Team Udayavani, Jul 24, 2022, 4:55 PM IST
ನವದೆಹಲಿ: ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ನಾಳೆ (ಜುಲೈ 25 )ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಸೋಮವಾರ ಬೆಳಗ್ಗೆ 10.15ಕ್ಕೆ ಸಮಾರಂಭ ನಡೆಯಲಿದ್ದು, ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರಿಗೆ ರಾಷ್ಟ್ರಪತಿಗಳ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
21 ಗನ್ ಸೆಲ್ಯೂಟ್ ನಂತರ ಪ್ರಮಾಣ ವಚನ ಸ್ವೀಕರಿಸಿ, ರಾಷ್ಟ್ರಪತಿ ಭಾಷಣ ಮಾಡಲಿದ್ದಾರೆ. ಸಮಾರಂಭದ ಮೊದಲು, ನಿರ್ಗಮಿಸುವ ರಾಷ್ಟ್ರಪತಿ ರಾಮ್ ನಾಥ್ ಕೊವಿಂದ್ ಮತ್ತು ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರು ವಿಧ್ಯುಕ್ತ ಮೆರವಣಿಗೆಯಲ್ಲಿ ಸಂಸತ್ತಿಗೆ ಆಗಮಿಸುತ್ತಾರೆ.
ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮಂತ್ರಿ ಮಂಡಳದ ಸದಸ್ಯರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ನಿಯೋಗಗಳ ಮುಖ್ಯಸ್ಥರು, ಸಂಸತ್ತಿನ ಸದಸ್ಯರು ಮತ್ತು ಪ್ರಮುಖ ನಾಗರಿಕ ಮತ್ತು ಮಿಲಿಟರಿ, ಸರಕಾದ ಅಧಿಕಾರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಸಮಾರಂಭದ ಮುಕ್ತಾಯದ ನಂತರ, ರಾಷ್ಟ್ರಪತಿಗಳು ರಾಷ್ಟ್ರಪತಿ ಭವನಕ್ಕೆ ತೆರಳುತ್ತಾರೆ, ಅಲ್ಲಿ ಅವರಿಗೆ ಮುಂಭಾಗದಲ್ಲಿ ಇಂಟರ್ ಸರ್ವಿಸ್ ಗಾರ್ಡ್ ಗೌರವವನ್ನು ನೀಡಲಾಗುತ್ತದೆ ಮತ್ತು ನಿರ್ಗಮಿಸುವ ರಾಷ್ಟ್ರಪತಿಗಳಿಗೆ ಗೌರವವನ್ನು ಸಲ್ಲಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.