Assam; ಮಣಿಪುರದಿಂದ ಸಾಗಿಸಲಾಗುತ್ತಿದ್ದ 5 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶ
Team Udayavani, Oct 29, 2023, 4:04 PM IST
ಕರ್ಬಿ ಅಂಗ್ಲಾಂಗ್ : ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಮಣಿಪುರದಿಂದ ಸಾಗಿಸುತ್ತಿದ್ದ 5 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಮತ್ತು ಓರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಖಚಿತ ಸುಳಿವಿನ ಮೇರೆಗೆ ಪೊಲೀಸರು ಶನಿವಾರ ರಾತ್ರಿ ಲಾಹೋರಿಜನ್ ಔಟ್ಪೋಸ್ಟ್ ಪ್ರದೇಶದಲ್ಲಿ ವಾಹನವನ್ನು ತಡೆದಿದ್ದಾರೆ. ವಾಹನದ ಸಂಪೂರ್ಣ ತಪಾಸಣೆಯ ನಂತರ, ಅಪಾರ ಪ್ರಮಾಣದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದು, ಮಣಿಪುರದಿಂದ ಬಂದ ಒಬ್ಬ ಪೆಡ್ಲರ್ ಅನ್ನು ಬಂಧಿಸಿದ್ದೇವೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜಿಬ್ ಕುಮಾರ್ ಸೈಕಿಯಾ ಪಿಟಿಐಗೆ ತಿಳಿಸಿದ್ದಾರೆ.
ಪೊಲೀಸ್ ಕಾರ್ಯಾಚರಣೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ”ಪೊಲೀಸರು 637.28 ಗ್ರಾಂ. ಹೆರಾಯಿನ್ ಹೊಂದಿರುವ 50 ಸೋಪ್ ಬಾಕ್ಸ್ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)ಮಾನದಂಡಗಳ ಪ್ರಕಾರ ವಶಪಡಿಸಿಕೊಂಡ ಡ್ರಗ್ಸ್ ಒಟ್ಟು ಮೌಲ್ಯ ಸುಮಾರು 5.1 ಕೋಟಿ ರೂ. ಎಂದು ಅಸ್ಸಾಂ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.