ಪುಲ್ವಾಮಾ ಬ್ಲಾಸ್ಟ್ ರೂವಾರಿ ಜಾಹಿದ್ ವಾನಿ ಸೇರಿ ಐವರು ಉಗ್ರರನ್ನು ಹೊಡೆದುರುಳಿಸಿದ ಸೇನೆ
Team Udayavani, Jan 30, 2022, 8:45 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಸಕ್ರಿಯ ಉಗ್ರಗಾಮಿ ಗುಂಪು ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಐವರು ಭಯೋತ್ಪಾದಕರನ್ನು ರಾತ್ರೋರಾತ್ರಿ ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಕಳೆದ 12 ಗಂಟೆಗಳಲ್ಲಿ ಭದ್ರತಾ ಪಡೆಗಳಿಂದ ಹತರಾದ ಉಗ್ರರಲ್ಲಿ ಜೆಇಎಂ ಕಮಾಂಡರ್ ಜಾಹಿದ್ ವಾನಿ ಮತ್ತು ಪಾಕಿಸ್ತಾನಿ ಭಯೋತ್ಪಾದಕರೂ ಸೇರಿದ್ದಾರೆ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.
14 ಫೆಬ್ರವರಿ 2019 ರಂದು 40 ಕ್ಕೂ ಹೆಚ್ಚು ಸಿಆರ್‌ಪಿಎಫ್ ಸಿಬ್ಬಂದಿ ಸಾವನ್ನಪ್ಪಿದ ಪುಲ್ವಾಮಾಘಟನೆಯಲ್ಲಿ ಜಾಹಿದ್ ವಾನಿ ಭಾಗಿಯಾಗಿದ್ದ.
ಪಾಕಿಸ್ತಾನಿ ಭಯೋತ್ಪಾದಕ ವಾಹಿದ್ ಅಹ್ಮದ್ ರಿಷಿ ಮತ್ತು ಇಬ್ಬರು ಸ್ಥಳೀಯ ಕಾರ್ಯಕರ್ತರು– ಕಫೀಲ್ ಅಲಿಯಾಸ್ ಛೋಟಾ ಪಾಕಿಸ್ತಾನಿ ಜೆಎಂ ಮತ್ತು ಇನಾಯತುಲ್ಲಾ ಮಿರ್ ಜೊತೆಗೆ ಜಾಹಿದ್‌ನನ್ನು ಹತ್ಯೆ ಮಾಡಲಾಗಿದೆ.
ಶನಿವಾರ ಸಂಜೆ, ಪುಲ್ವಾಮಾದ ನೈರಾ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾದ ನೈರಾ ಪ್ರದೇಶದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.
ದಕ್ಷಿಣ ಕಾಶ್ಮೀರದ ಪುಲ್ವಾಮಾದ ನೈರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದರೆ, ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚ್ರಾರ್-ಇ-ಶರೀಫ್ ಪ್ರದೇಶದಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.