ಮೂಲಭೂತವಾದ ಹೆಚ್ಚಲು ಜಾಲತಾಣ ಕಾರಣ:ಜ.ರಾವತ್
Team Udayavani, Oct 22, 2017, 7:05 AM IST
ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಮೂಲಭೂತವಾದ ಹೆಚ್ಚಲು ಸಾಮಾಜಿಕ ಜಾಲತಾಣಗಳೇ ಕಾರಣ ಎಂದು ಭೂಸೇನಾ ಮುಖ್ಯಸ್ಥ ಜ.ಬಿಪಿನ್ ರಾವತ್ ಆರೋಪಿಸಿದ್ದಾರೆ. ಒಂದು ದಿನದ ಭೇಟಿಗಾಗಿ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ ಅವರು, ಜಗತ್ತಿನಾದ್ಯಂತ ಮೂಲಭೂತವಾದಕ್ಕೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದೆ.
ಅದರಲ್ಲಿ ಸಾಮಾಜಿಕ ಜಾಲತಾಣಗಳದ್ದೇ ಹೆಚ್ಚಿನ ಕೊಡುಗೆ ಇದೆ ಎಂದರು. ಸಾರ್ವಜನಿಕರಲ್ಲಿ ಈ ಬಗ್ಗೆ ತಿಳಿವಳಿಕೆ ಮೂಡಿಸುವ ನಿಟ್ಟಿನಲ್ಲಿ ಸೇನೆಯೂ ಕಾರ್ಯನಿರತವಾಗಿದೆ ಎಂದು ಹೇಳಿದ್ದಾರೆ. ಚೀನ ಜತೆಗಿನ ಡೋಕ್ಲಾಂ ಮಾದರಿಯ ವಿವಾದಗಳು ಉಂಟಾದಲ್ಲಿ ಅದನ್ನು ಸಮರ್ಥವಾಗಿ ನಿಭಾಯಿಸಲು ಭಾರತೀಯ ಸೇನೆ ತಕ್ಕ ಸಾಮರ್ಥ್ಯ ಹೊಂದಿದೆ ಎಂದಿದ್ದಾರೆ ಜ.ರಾವತ್. ಜಡೆ ಕತ್ತರಿಸುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಅದೊಂದು ರಾಜ್ಯ ಸರಕಾರಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ಗಂಭೀರದ್ದೇನಲ್ಲ ಎಂದು ಪ್ರತಿಪಾದಿಸಿದರು.
45 ಬಂಧನ: ಈ ನಡುವೆ, ಬಾರಾಮುಲ್ಲಾ ಜಿಲ್ಲೆಯಲ್ಲಿ ತಲೆ ಬೋಳಿಸುತ್ತಿದ್ದ ಆರೋಪದ ಮೇಲೆ 45 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.