ಸಹಾಯಕ್ಕಾಗುವವನೇ ನಿಜವಾದ ದೋಸ್ತಿ: ಸಹಾಯಕ್ಕೆ ನಿಂತ ಭಾರತಕ್ಕೆ ಟರ್ಕಿಯ ಧನ್ಯವಾದ
Team Udayavani, Feb 7, 2023, 1:16 PM IST
ಹೊಸದಿಲ್ಲಿ: 24 ಗಂಟೆಯ ಅವಧಿಯಲ್ಲಿ ಟರ್ಕಿಯಲ್ಲಿ ಮೂರು ವಿನಾಶಕಾರಿ ಭೂಕಂಪಗಳು ಸಂಭವಿಸಿದ ನಂತರ ದೇಶಕ್ಕೆ ಸಹಾಯಹಸ್ತ ಚಾಚಿದ ಭಾರತವನ್ನು “ದೋಸ್ತ್” ಎಂದು ಟರ್ಕಿ ಬಿಂಬಿಸಿದೆ. ಭಾರತಕ್ಕೆ ಧನ್ಯವಾದಗಳನ್ನು ಅರ್ಪಿಸಿದ ಟರ್ಕಿಯ ರಾಯಭಾರಿ ಫಿರತ್ ಸುನೆಲ್, “ಅಗತ್ಯಕ್ಕಾಗುವ ಸ್ನೇಹಿತ ನಿಜವಾಗಿಯೂ ಸ್ನೇಹಿತ” ಎಂದು ಹೇಳಿದರು.
ಟ್ವಿಟ್ ಮಾಡಿರುವ ಫಿರತ್ ಸುನೆಲ್, “ದೋಸ್ತ್” ಎಂಬುದು ಟರ್ಕಿಶ್ ಮತ್ತು ಹಿಂದಿಯಲ್ಲಿ ಸಾಮಾನ್ಯ ಪದವಾಗಿದೆ. “ದೋಸ್ತ್ ಕರ ಗುಂಡೆ ಬೆಲ್ಲಿ ಓಲುರ್” (ಅಗತ್ಯಕ್ಕಾಗುವ ಸ್ನೇಹಿತ ನಿಜವಾಗಿಯೂ ಸ್ನೇಹಿತ) ಎಂಬ ಟರ್ಕಿಶ್ ಗಾದೆಯಿದೆ, ಭಾರತಕ್ಕೆ ತುಂಬಾ ಧನ್ಯವಾದಗಳು.” ಎಂದಿದ್ದಾರೆ.
ಇದಕ್ಕೂ ಮೊದಲು ಭಾರತದ ವಿದೇಶಾಂಗ ಖಾತೆ ರಾಜ್ಯ ಸಚಿವ ವಿ ಮುರಳೀಧರನ್ ಅವರು ಭಾರತದಲ್ಲಿನ ಟರ್ಕಿ ರಾಯಭಾರ ಕಚೇರಿಗೆ ಭೇಟಿ ನೀಡಿದರು. ಅಲ್ಲಿ ಟರ್ಕಿಯ ಭೂಕಂಪದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶವನ್ನು ತಿಳಿಸಿದರು.
ಇದನ್ನೂ ಓದಿ:ಅವರಿಗೆ ಏನೂ ಮಾಡಲು ಸಾಧ್ಯವಿಲ್ಲ..; ಪಾಕ್ ಎಚ್ಚರಿಕೆಗೆ ಅಶ್ವಿನ್ ತಿರುಗೇಟು
ವಿಶೇಷ ತರಬೇತಿ ಪಡೆದ ಶ್ವಾನ ದಳ ಮತ್ತು ಅಗತ್ಯ ಉಪಕರಣಗಳೊಂದಿಗೆ 100 ಸಿಬ್ಬಂದಿಯನ್ನು ಒಳಗೊಂಡ ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ (ಎನ್‌ಡಿಆರ್‌ಎಫ್) ಯ ಎರಡು ತಂಡಗಳು ಭೂಕಂಪ ಪೀಡಿತ ಪ್ರದೇಶಕ್ಕೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಭಾರತದಿಂದ ಕಳುಹಿಸಲಾಗಿದೆ.
“ತರಬೇತಿ ಪಡೆದ ವೈದ್ಯರು ಮತ್ತು ಅರೆವೈದ್ಯರೊಂದಿಗೆ ಅಗತ್ಯ ಔಷಧಿಗಳೊಂದಿಗೆ ವೈದ್ಯಕೀಯ ತಂಡಗಳನ್ನು ಸಹ ಸಿದ್ಧಪಡಿಸಲಾಗಿದೆ. ಟರ್ಕಿಯ ಸರ್ಕಾರ ಮತ್ತು ಅಂಕಾರದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಇಸ್ತಾನ್ಬುಲ್ ನಲ್ಲಿರುವ ಕಾನ್ಸುಲೇಟ್ ಜನರಲ್ ಕಚೇರಿಯ ಸಮನ್ವಯದಲ್ಲಿ ಪರಿಹಾರ ಸಾಮಗ್ರಿಗಳನ್ನು ರವಾನಿಸಲಾಗುತ್ತದೆ” ಎಂದು ಪಿಎಂಒ ಹೇಳಿದೆ.
“Dost” is a common word in Turkish and Hindi… We have a Turkish proverb: “Dost kara günde belli olur” (a friend in need is a friend indeed).
Thank you very much 🇮🇳@narendramodi @PMOIndia @DrSJaishankar @MEAIndia @MOS_MEA #earthquaketurkey https://t.co/nB97RubRJU— Fırat Sunel फिरात सुनेल فرات صونال (@firatsunel) February 6, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.