ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭೂಕಂಪ; ಐವರು ಸಾವು, ನೂರಾರು ಮಂದಿಗೆ ಗಾಯ
Team Udayavani, Sep 24, 2019, 5:13 PM IST
ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸಂಭವಿಸಿದ ಭೂಕಂಪದಲ್ಲಿ ಐವರು ಸಾವನ್ನಪ್ಪಿದ್ದು, 50ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಭೂಕಂಪ ರಿಕ್ಷರ್ ಮಾಪಕದಲ್ಲಿ 5.8ರಷ್ಟು ತೀವ್ರತೆ ದಾಖಲಾಗಿದೆ.
ಶ್ರೀನಗರದಿಂದ 140 ಕಿಲೋ ಮೀಟರ್ ದೂರದಲ್ಲಿರುವ ಪಿಒಕೆ ಸಮೀಪದ ಹೊಸ ಮಿರ್ ಪುರ್ ಭೂಕಂಪದ ಕೇಂದ್ರ ಬಿಂದು ಗುರುತಿಸಲಾಗಿದೆ ಎಂದು ಅಮೆರಿಕದ ಭೂಗರ್ಭ ಶಾಸ್ತ್ರ ಸಮೀಕ್ಷೆ ವರದಿ ಮಾಡಿದೆ.
ಇಂದು ಮಧ್ಯಾಹ್ನ 4.33ರ ಸುಮಾರಿಗೆ ಪಂಜಾಬ್, ಛತ್ತೀಸ್ ಗಢ್, ಉತ್ತರಪ್ರದೇಶ, ಜಮ್ಮು-ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವೆಡೆ ಲಘು ಭೂಕಂಪನವಾಗಿರುವುದಾಗಿ ವರದಿ ವಿವರಿಸಿತ್ತು.
ಪಾಕ್ ಆಕ್ರಮಿತ ಕಾಶ್ಮೀರದ ಮಿರ್ ಪುರ್ ರಸ್ತೆಗಳಲ್ಲಿ ಎಮರ್ಜೆನ್ಸಿ ಘೋಷಿಸಲಾಗಿದೆ. ಭೂಕಂಪದಿಂದ ವಿದ್ಯುತ್, ದೂರವಾಣಿ ಸಂಪರ್ಕ ಕಡಿತಗೊಂಡಿದ್ದು, ರಸ್ತೆಗಳೆಲ್ಲಾ ಭಾರೀ ಕುಸಿತವಾಗಿದ್ದು, ಸಂಪರ್ಕ ಕಡಿತಗೊಂಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.