ಊಟ, ತಿಂಡಿ ದರ ಇಳಿಕೆ ಮಾಡಿ ಸ್ವಾಮಿ
Team Udayavani, Jul 12, 2017, 4:10 AM IST
ನವದೆಹಲಿ: ಜಿಎಸ್ಟಿ ಹೆಸರನ್ನು ಹೇಳಿ ಊಟ-ತಿಂಡಿ ದರ ಹೆಚ್ಚಳ ಮಾಡಿದ್ದ ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಕೇಂದ್ರ ಕಂದಾಯ ಕಾರ್ಯದರ್ಶಿ ಹಸ್ಮುಖ್ ಅಧಿಯಾ ಬಿಸಿ ಮುಟ್ಟಿಸಿದ್ದಾರೆ. ಸರಕು ಮತ್ತು ಸೇವೆಗಳ ತೆರಿಗೆ ಜಾರಿಗೆ ಬಂದ ಮೇಲೆ ಹೋಟೆಲ್ಗಳಲ್ಲಿ ಬಳಕೆ ಮಾಡುವ ದಿನಸಿ ಸಾಮಗ್ರಿಗಳ ಬೆಲೆ ಇಳಿಕೆಯಾಗಿದೆ. ಹೀಗಾಗಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ದರ ಕಡಿಮೆಯಾಗಬೇಕೇ ವಿನಃ ಹೆಚ್ಚಾಗುವಂತಿಲ್ಲ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅಧಿಯಾ, ಹೋಟೆಲ್ಗಳಲ್ಲಿ ಗಣನೀಯವಾಗಿ ದರ ಹೆಚ್ಚಾಗುತ್ತಿರುವ ಬಗ್ಗೆ ಸ್ಪಷ್ಟನೆ ನೀಡಿದರು. ಅಲ್ಲದೆ ಯಾವ ಯಾವ ಹಂತಕ್ಕೆ ಹೇಗೆ ತೆರಿಗೆ ನಿಗದಿ ಮಾಡಲಾಗುತ್ತದೆ ಎಂಬ ಮಾಹಿತಿ ನೀಡಿದರು. ಸರಕು ಮತ್ತು ಸೇವಾ ತೆರಿಗೆಗಳಲ್ಲಿ ಇನ್ ಪುಟ್ ಕ್ರೆಡಿಟ್ (ಒಳಪರಿಕರ) ಪ್ರಮಾಣ ತಗ್ಗಿಸಿರುವುದರಿಂದ ರೆಸ್ಟೋರೆಂಟ್, ಹೋಟೆಲ್ಗಳ ಮಾಲೀಕರು ದರ ಕಡಿಮೆ ಮಾಡಬಹುದು. ಒಂದು ವೇಳೆ ಊಟದ ಜತೆಗೆ ಮದ್ಯ ಸೇವನೆ ಮಾಡಿದಲ್ಲಿ ಅದಕ್ಕೆ ಪ್ರತ್ಯೇಕವಾಗಿ ಮೌಲ್ಯ ವರ್ಧಿತ ತೆರಿಗೆ (ವ್ಯಾಟ್) ಸೇರ್ಪಡೆಯಾಗುತ್ತದೆ. ಇಂಥವುಗಳಲ್ಲಿ ಬೆಲೆ ಹೆಚ್ಚಾಗುತ್ತದೆ ಎಂದು ಅಧಿಯಾ ಹೇಳಿದ್ದಾರೆ. ಜಿಎಸ್ಟಿ ವ್ಯವಸ್ಥೆಯಲ್ಲಿ ಹವಾನಿಯಂತ್ರಣ ವ್ಯವಸ್ಥೆ ಇಲ್ಲದ ರೆಸ್ಟೋರೆಂಟ್ಗಳಿಗೆ ಶೇ.12ರಷ್ಟು ತೆರಿಗೆ ವಿಧಿಸಲಾಗುತ್ತದೆ. ಹವಾನಿಯಂತ್ರಣ ವ್ಯವಸ್ಥೆ ಇರುವ ರೆಸ್ಟೋರೆಂಟ್ಗಳಿಗೆ ಶೇ.18ರಷ್ಟು ತೆರಿಗೆ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Sullia: ಜಾಕ್ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.