ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್
Team Udayavani, Jan 18, 2023, 3:22 PM IST
ನವದೆಹಲಿ: ಮೂರು ಈಶಾನ್ಯ ರಾಜ್ಯದಲ್ಲಿ ತಲಾ 60 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಿಗದಿಯಾಗಿದ್ದು, ತ್ರಿಪುರಾದಲ್ಲಿ ಫೆಬ್ರವರಿ 16 ರಂದು ಮತ್ತು ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ಫೆಬ್ರವರಿ 27 ರಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಮಾರ್ಚ್ 2 ರಂದು ಫಲಿತಾಂಶ ಪ್ರಕಟವಾಗಲಿದೆ.
ಬುಧವಾರ ಸುದ್ದಿಗೋಷ್ಠಿ ನಡೆಸಿ ಚುನಾವಣ ದಿನಾಂಕಗಳನ್ನು ಪ್ರಕಟಿಸಿದ ಚುನಾವಣ ಆಯೋಗ ಮುಖ್ಯಸ್ಥ ರಾಜೀವ್ ಕುಮಾರ್ ಅವರು, ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾದಲ್ಲಿ ಒಟ್ಟು 62.8 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. 31.47 ಲಕ್ಷ ಮಹಿಳಾ ಮತದಾರರು, 97,000 80 ವರ್ಷ ಮೇಲ್ಪಟ್ಟ ಮತದಾರರು ಮತ್ತು 31,700 ಅಂಗವಿಕಲ ಮತದಾರರಿದ್ದಾರೆ. 3 ರಾಜ್ಯಗಳಲ್ಲಿ ಚುನಾವಣೆಯಲ್ಲಿ ಭಾಗವಹಿಸಲು 1.76 ಲಕ್ಷಕ್ಕೂ ಹೆಚ್ಚು ಮೊದಲ ಬಾರಿಯ ಮತದಾರರಿದ್ದಾರೆ ಎಂದು ತಿಳಿಸಿದರು.
ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾಗಳ ಶಾಸನ ಸಭೆಗಳ ಅವಧಿಯು ಕ್ರಮವಾಗಿ ಮಾರ್ಚ್ 12, ಮಾರ್ಚ್ 15 ಮತ್ತು ಮಾರ್ಚ್ 22, 2023 ರಂದು ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದರು.
ನಾಲ್ಕು ಈಶಾನ್ಯ ರಾಜ್ಯಗಳಾದ ತ್ರಿಪುರ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಮಿಜೋರಾಂನಲ್ಲಿ ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ಕರ್ನಾಟಕ, ತೆಲಂಗಾಣದಲ್ಲಿ 2023 ರಲ್ಲಿ ಚುನಾವಣೆಗೆಗಳು ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.