ಆರ್ಥಿಕ ಬಿಕ್ಕಟ್ಟು ಎನ್ನುವುದು ಕಂಪೆನಿಗಳ ಒತ್ತಡ ತಂತ್ರ: ಸುಶೀಲ್
Team Udayavani, Sep 19, 2019, 5:18 AM IST
ಪಾಟ್ನಾ: ದೇಶವು ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿಲ್ಲ. ದೊಡ್ಡ ದೊಡ್ಡ ಕಂಪೆನಿಗಳು ಉತ್ಪಾದನೆಯಲ್ಲಿ ಕುಂಠಿತವಾಗಿದೆ ಎಂದು ಸುಳ್ಳು ಹೇಳಿ ಕೊಂಡು ಸರಕಾರದ ಮೇಲೆ ಒತ್ತಡ ಹಾಕಿ ತೆರಿಗೆ ದರವನ್ನು ಇಳಿಸಲು ಮಾಡುತ್ತಿರುವ ತಂತ್ರವಿದು ಎಂದು ಬಿಜೆಪಿ ನಾಯಕ, ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಆರೋಪಿಸಿದ್ದಾರೆ.
ಬುಧವಾರ ಮಾತನಾಡಿದ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಪಾರ್ಲೆಜಿ ಬಿಸ್ಕಿಟ್ ಕಂಪೆನಿಯ ಉದಾಹರಣೆ ನೀಡಿದ್ದಾರೆ. ಅಭಿವೃದ್ಧಿ ಹೊಂದಿರುವ ರಾಜ್ಯಗಳು ಅಗ್ಗದ ಮಿಠಾಯಿಯನ್ನು ಖರೀದಿಸುವ ಬದಲು, ದುಬಾರಿ ಬೆಲೆಯ ಪೇಸ್ಟ್ರಿಗಳನ್ನು ಖರೀದಿಸುತ್ತಿವೆ. ಹೀಗಾಗಿ, ಬಿಸ್ಕಿಟ್ನ ಬೇಡಿಕೆ ಕಡಿಮೆಯಾಗಿರಬಹುದು ಎಂದಿದ್ದಾರೆ.
ಒಟ್ಟಿನಲ್ಲಿ ತೆರಿಗೆ ದರ ಇಳಿಸಲು ಕಾರ್ಪೊರೇಟ್ ಕಂಪೆನಿಗಳು ನಡೆಸುತ್ತಿರುವ ಲಾಬಿಯಿದು. ದೇಶದ ಆರ್ಥಿಕ ಸ್ಥಿತಿಗೆ ಏನೂ ಆಗಿಲ್ಲ ಎಂದೂ ಅವರು ಹೇಳಿದ್ದಾರೆ. ನಿತೀಶ್ ಸರಕಾರದಲ್ಲಿ ಹಣಕಾಸು ಖಾತೆಯನ್ನೂ ನಿರ್ವಹಿ ಸುತ್ತಿರುವ ಸುಶೀಲ್ ಮೋದಿ ಅವರ ಈ ಹೇಳಿಕೆಗೆ ಪ್ರತಿಪಕ್ಷ ಆರ್ಜೆಡಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. “ಸುಶೀಲ್ ಅವರ ಹೇಳಿಕೆಯನ್ನು ನೋಡಿದರೆ ಫ್ರಾನ್ಸ್ ನ ರಾಣಿಯೊಬ್ಬರ ಹೇಳಿಕೆ ನೆನಪಾಗುತ್ತದೆ. ಜನರಿಗೆ ತಿನ್ನಲು ಬ್ರೆಡ್ ಇಲ್ಲದಿದ್ದರೆ, ಅವರು ಕೇಕ್ ತಿನ್ನಲಿ ಎಂದು ಆ ರಾಣಿ ಹೇಳಿದ್ದರಂತೆ. ಸುಶೀಲ್ ಹೇಳಿಕೆಯು ಅವರ ಮೂರ್ಖತನವನ್ನು ಪ್ರದರ್ಶಿಸಿದೆ’ ಎಂದು ಆರ್ಜೆಡಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.