ಆರ್ಥಿಕ ಕುಸಿತದಿಂದ ಪುಟಿದೇಳುವ ಶಕ್ತಿ ಇದೆ
Team Udayavani, Dec 20, 2019, 11:58 PM IST
ಹೊಸದಿಲ್ಲಿ: ಪ್ರಸ್ತುತ ಆರ್ಥಿಕ ಕುಸಿತದಿಂದ ಹೊರಬಂದು ಮತ್ತೆ ಪುಟಿದೇಳುವ ಸಾಮರ್ಥ್ಯ ಭಾರತಕ್ಕೆ ಇದೆ. 2024ರ ಹೊತ್ತಿಗೆ ನಾವು 5 ಲಕ್ಷಕೋಟಿ ಡಾಲರ್ ಆರ್ಥಿಕತೆಯ ಗುರಿ ಸಾಧಿಸುವುದು ಖಚಿತ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಿಲ್ಲಿಯಲ್ಲಿ ಶುಕ್ರವಾರ ನಡೆದ ಅಸ್ಸೋ ಚಾಮ್ ಕಾರ್ಯಕ್ರಮದಲ್ಲಿ ವಿಶ್ವದ ಕಾರ್ಪೊರೆಟ್ ಉದ್ದಿಮೆಗಳ ನಾಯಕರು, ರಾಯಭಾರಿಗಳು ಮತ್ತಿತರ ಗಣ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೈಗಾರಿಕೆಗಳ ಬೆಳವಣಿಗೆಗೆ ಪೂರಕವಾಗಿ ಕಂಪನಿ ಕಾಯ್ದೆಯಡಿ ಅನುಪಯುಕ್ತ ಕಾನೂನುಗಳನ್ನು ರದ್ದು ಪಡಿಸಲಾಗುವುದು. ಹಲವು ಸುಧಾರಣಾ ಕ್ರಮ ಕೈಗೊಂಡಿದ್ದೇವೆ. ಜಿಡಿಪಿ ಪ್ರಗತಿ ಹೆಚ್ಚಿಸಲು ಕಾರ್ಪೊರೇಟ್ ಕಂಪನಿಗಳು ದಿಟ್ಟ ಹೂಡಿಕೆ ನಿರ್ಧಾರ ಕೈಗೊಳ್ಳಬೇಕು ಎಂದರು.
ಕೇಂದ್ರವು ಮುಂದಿನ ವರ್ಷಗಳಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 100 ಲಕ್ಷ ಕೋಟಿ ರೂ. ಹಾಗೂ ಗ್ರಾಮೀಣ ವಲಯ ಆರ್ಥಿಕತೆಗೆ 25 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಿದೆ. ಇದು 5 ಟ್ರಿಲಿಯನ್ ಡಾಲರ್ ಆರ್ಥಿಕತೆ ತಲುಪಲು ನೆರವಾಗಲಿದೆ ಎಂದಿದ್ದಾರೆ. ಉದ್ಯಮ ಸ್ನೇಹಿ ರಾಷ್ಟ್ರಗಳ ಪಟ್ಟಿಯಲ್ಲಿ ಕಳೆದ 3 ಅವಧಿಯಲ್ಲಿ ಭಾರತ 142ರಿಂದ 63 ನೇ ಸ್ಥಾನಕ್ಕೆ ಜಿಗಿದಿದೆ. ಬ್ಯಾಂಕಿಂಗ್, ಕಾರ್ಮಿಕ ಸೇರಿ ಹಲವಾರು ವಲಯಗಳಲ್ಲಿ ಸುಧಾರಣೆ, ಸುಲಭ ವಹಿವಾಟಿಗೆ ಅವಕಾಶ ಕಲ್ಪಿಸಿದ್ದೇವೆ. ಈಗ ಕೆಲವೇ ಗಂಟೆಗಳಲ್ಲಿ ಕಂಪನಿ ಸ್ಥಾಪಿಸಬಹುದಾಗಿದೆ ಎಂದಿದ್ದಾರೆ. ಕ್ರಮಬದ್ಧ ಹಾಗೂ ಆಧುನೀ ಕರಣ ಎಂಬ ಎರಡು ಬಲಿಷ್ಠ ಕಂಬಗಳ ಮೇಲೆ ಭಾರತದ ಆರ್ಥಿಕ ವ್ಯವಸ್ಥೆಯನ್ನು ಸದೃಢಗೊಳಿಸುತ್ತಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.