Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Team Udayavani, Apr 18, 2024, 9:21 AM IST
ನವದೆಹಲಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಇತರರ ವಿರುದ್ಧ ಅಕ್ರಮ ಭೂಕಬಳಿಕೆ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ನಾಲ್ವರನ್ನು ಹೊಸದಾಗಿ ಬಂಧಿಸಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅಡಿಯಲ್ಲಿ ಬಂಧನಕ್ಕೊಳಗಾದವರನ್ನು ಅಂತು ಟಿರ್ಕಿ, ಪ್ರಿಯಾ ರಂಜನ್ ಸಹಾಯ್, ಬಿಪಿನ್ ಸಿಂಗ್ ಮತ್ತು ಇರ್ಷಾದ್ ಎನ್ನಲಾಗಿದೆ.
ಮಂಗಳವಾರ ಟಿರ್ಕಿ ಮತ್ತು ಇತರ ಕೆಲವರ ನಿವಾಸಗಳ ಮೇಲೆ ಇಡಿ ಶೋಧ ನಡೆಸಿತ್ತು. ಈ ಬಂಧನದೊಂದಿಗೆ ಈ ಪ್ರಕರಣದಲ್ಲಿ ಬಂಧಿತರಾಗಿರುವವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
48 ವರ್ಷದ ಸೋರೆನ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಇಡಿ ಅವರನ್ನು ಜನವರಿಯಲ್ಲಿ ಬಂಧಿಸಿತ್ತು. ಪ್ರಸ್ತುತ ಅವರನ್ನು ಇಲ್ಲಿನ ಹೊತ್ವಾರ್‌ನಲ್ಲಿರುವ ಬಿರ್ಸಾ ಮುಂಡಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಪ್ರಧಾನ ಆರೋಪಿ ಮತ್ತು ಕಂದಾಯ ಇಲಾಖೆಯ ಮಾಜಿ ಸಬ್ ಇನ್ಸ್‌ಪೆಕ್ಟರ್ ಭಾನು ಪ್ರತಾಪ್ ಪ್ರಸಾದ್, ಮೊಹಮ್ಮದ್ ಸದ್ದಾಂ ಹುಸೇನ್ ಮತ್ತು ಅಫ್ಸರ್ ಅಲಿ ಅವರನ್ನೂ ಈ ಪ್ರಕರಣದಲ್ಲಿ ಬಂಧಿಸಲಾಗಿದೆ.
ಸೋರೆನ್ ವಿರುದ್ಧದ ತನಿಖೆಯು ರಾಂಚಿಯ 8.86 ಎಕರೆ ಭೂಮಿಗೆ ಸಂಬಂಧಿಸಿದೆ, ಅವರು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಇಡಿ ಆರೋಪಿಸಿದೆ.
ಇದನ್ನೂ ಓದಿ: Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.