ಅಕ್ರಮ ಹಣ ವರ್ಗಾವಣೆ ಪ್ರಕರಣ: ನೀರವ್ ಮೋದಿ ಆಸ್ತಿ ಜಪ್ತಿ ಮಾಡಿದ ಇ.ಡಿ.
Team Udayavani, Jul 22, 2022, 9:57 PM IST
ನವದೆಹಲಿ: ಭಾರತದ ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ವಂಚಿಸಿ, ಪರಾರಿಯಾಗಿರುವ ವಜ್ರೋದ್ಯಮಿ ನೀರವ್ ಮೋದಿ ಅವರಿಗೆ ಸೇರಿದ 253.62 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಶುಕ್ರವಾರ ಜಪ್ತಿ ಮಾಡಿದೆ.
ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಜಪ್ತಿ ಕಾರ್ಯಾಚರಣೆ ನಡೆಸಲಾಗಿದೆ.
ಹಾಂಕಾಂಗ್ನಲ್ಲಿರುವ ನೀರವ್ ಮೋದಿ ಗ್ರೂಪ್ ಆಫ್ ಕಂಪನೀಸ್ ಪ್ರಕ ಣಕ್ಕೆ ಸಂಬಂಧಿಸಿದಂತೆ ಆಭರಣಗಳು, ಬ್ಯಾಂಕ್ನಲ್ಲಿದ್ದ ಉಳಿತಾಯ ಸೇರಿ ಹಲವು ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಇದೂ ಸೇರಿದಂತೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಈವರೆಗೆ ನೀರವ್ ಮೋದಿಯವರಿಗೆ ಸೇರಿದ 2,650.07 ಕೋಟಿ ರೂ.ಗಳನ್ನು ಜಪ್ತಿ ಮಾಡಿದಂತಾಗಿದೆ. ನೀರವ್ ಸದ್ಯ ಯುನೈಟೆಡ್ ಕಿಂಗ್ಡಮ್ನ ಜೈಲಿನಲ್ಲಿದ್ದಾರೆ. ಅವರನ್ನು ಭಾರತಕ್ಕೆ ಕರೆತರಲು ಪ್ರಯತ್ನ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.