ಉಪಾಹಾರಕ್ಕೂ ಒತ್ತು: ಹೊಸ ಶಿಕ್ಷಣ ನೀತಿಯಲ್ಲಿ ಉಲ್ಲೇಖ
Team Udayavani, Aug 3, 2020, 6:50 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಕಲಿಯುವ ಮಕ್ಕಳಿಗೆ ಪೌಷ್ಟಿಕಾಂಶ ಸಮೃದ್ಧ ಆಹಾರವನ್ನು ಒದಗಿಸಿದರೆ ಉತ್ತಮ ಎಂಬುದು ಹೊಸ ಶಿಕ್ಷಣ ನೀತಿಯ ಪ್ರಮುಖ ಅಂಶಗಳಲ್ಲಿ ಒಂದು.
ಸದ್ಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ.
ಇದರ ಜತೆಗೆ ಬೆಳಗ್ಗಿನ ಉಪಾಹಾರವನ್ನೂ ನೀಡಿದರೆ ಕಲಿಕಾ ಸಾಮರ್ಥ್ಯ ಹೆಚ್ಚುತ್ತದೆ ಎಂದು ಶಿಕ್ಷಣ ನೀತಿಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಉಪಾಹಾರವೇಕೆ?
ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಬೆಳಗ್ಗಿನ ಉಪಾಹಾರ ಕೊಟ್ಟರೆ ಮಕ್ಕಳು ಪಾಠವನ್ನು ಚೆನ್ನಾಗಿ ಅರ್ಥೈಸಿಕೊಳ್ಳುತ್ತಾರೆ. ಬಿಸಿಯೂಟಕ್ಕೆ ಪೂರಕವಾಗಿ ಇದನ್ನೂ ನೀಡಬಹುದು ಎಂದು ವರದಿ ಅಭಿಪ್ರಾಯಪಟ್ಟಿದೆ.
ಪೌಷ್ಟಿಕಾಂಶಯುಕ್ತ ಆಹಾರದ ಮಹತ್ವದ ಬಗ್ಗೆಯೂ ಈ ವರದಿಯಲ್ಲಿ ಉಲ್ಲೇಖೀಸಲಾಗಿದೆ. ಮಕ್ಕಳು ಅನಾರೋಗ್ಯಕ್ಕೀಡಾಗಿದ್ದರೆ, ಪೌಷ್ಟಿಕಾಂಶ ಕೊರತೆಯಿಂದ ಬಳಲುತ್ತಿದ್ದರೆ ಅವರ ಕಲಿಕೆ ಸಾಮರ್ಥ್ಯ ಕಡಿಮೆ ಇರುತ್ತದೆ. ಹೀಗಾಗಿ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಅಗತ್ಯ. ಜತೆಗೆ ಶಾಲಾ ಕಲಿಕೆಯಲ್ಲಿ ತರಬೇತಾದ ಸಾಮಾಜಿಕ ಕಾರ್ಯಕರ್ತರು, ಆಪ್ತಸಮಾಲೋಚಕರು ಮತ್ತು ಸಮುದಾಯವೂ ಒಳಗೊಳ್ಳುವಂತೆ ಮಾಡ ಬೇಕು ಎಂದು ವರದಿ ತಿಳಿಸಿದೆ.
ನೆಲಗಡಲೆ, ಕಡಲೆ ನೀಡಿ
ಬೆಳಗ್ಗೆ ಬಿಸಿ ಉಪಾಹಾರ ನೀಡಲು ಸಾಧ್ಯವಾಗದಿದ್ದಲ್ಲಿ ನೆಲಗಡಲೆ ಅಥವಾ ಕಡಲೆ ನೀಡಬಹುದು. ಬೆಲ್ಲ ಯಾ ಸ್ಥಳೀಯ ಹಣ್ಣುಗಳನ್ನು ಮಿಶ್ರ ಮಾಡಿ ನೀಡಬಹುದು ಎಂದು ವರದಿ ತಿಳಿಸಿದೆ. ಮಕ್ಕಳ ಆರೋಗ್ಯ ಪರೀಕ್ಷಿಸಬೇಕು. ಅವರು ಉತ್ತಮ ರೋಗ ನಿರೋಧಕ ಶಕ್ತಿ ಹೊಂದಿರಬೇಕು, ಹೆಲ್ತ್ ಕಾರ್ಡ್ ನೀಡಿ ಆರೋಗ್ಯದ ಮೇಲೆ ನಿಗಾ ಇರಿಸ ಬೇಕು ಎಂದೂ ವರದಿ ಹೇಳಿದೆ.
ಪೂರ್ವ ಪ್ರಾಥಮಿಕಕ್ಕೂ ಬಿಸಿಯೂಟ ಕೊಡಿ
ಸದ್ಯ ಬಿಸಿಯೂಟ 1ರಿಂದ 8ನೇ ತರಗತಿವರೆಗೆ ಮಾತ್ರ ಇದೆ. ಮುಂದೆ 5 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೂ ಒದಗಿಸಲು ವರದಿ ಶಿಫಾರಸು ನೀಡಿದೆ. ಈ ವಯೋಹಂತ ಮಹತ್ವದ್ದಾಗಿದ್ದು, ಮಧ್ಯಾಹ್ನದ ಬಿಸಿಯೂಟವನ್ನು ಇಲ್ಲಿಗೂ ವಿಸ್ತರಣೆ ಮಾಡಬಹುದಾಗಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.