ಆವಂತಿಪೋರಾ: ಉಗ್ರರಿಂದ ಐಇಡಿ ಬ್ಲಾಸ್ಟ್;44 CRPF ಯೋಧರು ಹುತಾತ್ಮ
Team Udayavani, Feb 14, 2019, 11:12 AM IST
ಶ್ರೀನಗರ : ಉಗ್ರರ ಗುಂಪೊಂದು ಇಂದು ಗುರುವಾರ ಪುಲ್ವಾಮಾದ ಆವಂತಿಪೋರಾದ ಗೋರಿಪುರ ಪ್ರದೇಶದಲ್ಲಿ ಸಾಗುತ್ತಿದ್ದ ಸಿಆರ್ಪಿಎಫ್ ವಾಹನಗಳ ಸಾಲನ್ನು ಗುರಿ ಇರಿಸಿ ಐಇಡಿ ಬ್ಲಾಸ್ಟ್ ನಡೆಸಿದ್ದು ಕನಿಷ್ಠ 44 ಸಿಆರ್ಪಿಎಫ್ ಸೈನಿಕರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಐಇಡಿ ಬ್ಲಾಸ್ಟ್ನ ತೀವ್ರತೆಯಲ್ಲಿ ಸಿಆರ್ಪಿಎಫ್ ಸೈನಿಕರು ಮತ್ತು ಹಲವು ಜನರು ಕೂಡ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಪಾಕ್ ಮೂಲದ ಜೈಶ್ ಎ ಮೊಹಮ್ಮದ್ ಉಗ್ರರು ಇದು ತಮ್ಮದೇ ಕೃತ್ಯವೆಂದು ಹೇಳಿಕೊಂಡಿದ್ದಾರೆ.
ಗಾಯಾಳು ಸಿಆರ್ಪಿಎಫ್ ಯೋಧರಲ್ಲಿ ಹಲವರ ಸ್ಥಿತಿ ಗಂಭೀರವಿದೆ. ಹಾಗಾಗಿ ಸಾವಿನ ಸಂಖ್ಯೆ ಹೆಚ್ಚುವ ಭೀತಿ ಇದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಸಿಆರ್ಪಿಎಫ್ ಯೋಧರ ವಾಹನವನ್ನು ಜೈಶ್ ಉಗ್ರರು ಜಮ್ಮು ಕಾಶ್ಮೀರ ಹೈವೇಯಲ್ಲಿನ ಆವಂತಿಪುರ ಪ್ರದೇಶದಲ್ಲಿ ಸ್ಫೋಟಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಘಟನೆ ನಡೆದ ಸುದ್ದಿ ತಿಳಿದೊಡನೆಯೇ ಹೆಚ್ಚುವರಿ ಭದ್ರತಾ ಪಡೆಯನ್ನು ಬ್ಲಾಸ್ಟ್ ನಡೆದ ತಾಣಕ್ಕೆ ರವಾನಿಸಲಾಗಿದ್ದು ಇಡಿಯ ಪ್ರದೇಶವನ್ನು ಈಗ ಸುತ್ತುವರಿಯಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಜಮ್ಮು ಕಾಶ್ಮೀರದ ಬಡಗಾಂವ್ನಲ್ಲಿ ನಿನ್ನೆಯಷ್ಟೇ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಘಟನೆಗೆ ಪ್ರತೀಕಾರವಾಗಿ ಉಗ್ರರು ಇಂದಿನ ಐಇಡಿ ಬ್ಲಾಸ್ಟ್ ನಡೆಸಿರಬೇಕೆಂದು ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.