![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 9, 2023, 9:04 PM IST
ರಾಜ್ ಕೋಟ್(ಗುಜರಾತ್) : ನಗರದಲ್ಲಿ ಎಂಟು ವರ್ಷದ ಬಾಲಕಿಯನ್ನು ಮೂವರು ಕಾಮುಕರು ಅಪಹರಿಸಿ, ಸಾಮೂಹಿಕವಾಗಿ ಅತ್ಯಾಚಾರ ಎಸಗಿ ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಬಾಲಕಿಯ ತಂದೆಗೆ ಪರಿಚಿತರೇ ಆಗಿರುವ ಮೂವರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾಣೆಯಾದ ಒಂದು ದಿನದ ನಂತರ ಅಕ್ಟೋಬರ್ 7 ರಂದು ನಗರದ ರೈಲ್ವೆ ನಿಲ್ದಾಣದ ಹಿಂಭಾಗದ ಪ್ರತ್ಯೇಕ ಸ್ಥಳದಲ್ಲಿ ಮಗುವಿನ ಶವ ಪತ್ತೆಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಗುಪ್ತಚರ ಇನ್‌ಪುಟ್‌ಗಳ ಆಧಾರದ ಮೇಲೆ ನಗರ ಅಪರಾಧ ವಿಭಾಗವು ಆರೋಪಿಗಳ ಮೇಲೆ ಶೋಧ ಕಾರ್ಯ ನಡೆಸಿ ಬಂಧಿಸಿತು. ಬಂಧಿತ ಮೂವರು ಸಂತ್ರಸ್ತೆಯ ತಂದೆಗೆ ಪರಿಚಿತರು ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ ವಿಧಿ ಚೌಧರಿ ತಿಳಿಸಿದ್ದಾರೆ.
“ಆರೋಪಿಗಳು ಬಾಲಕಿಯ ತಲೆಗೆ ಕಲ್ಲಿನಿಂದ ಹೊಡೆದು ಅತ್ಯಾಚಾರ ಮತ್ತು ಕೊಲೆ ಮಾಡಿದ್ದಾರೆ. ಆರೋಪಿಗಳು ಬಾಲಕಿಯಯ ತಂದೆಗೆ ತಿಳಿಯುತ್ತದೆ ಎಂಬ ಕಾರಣಕ್ಕೆ, ತಮ್ಮ ಕುಕೃತ್ಯದ ಬಗ್ಗೆ ಹೇಳಬಹುದೆಂದು ಅಂಜಿ ಕೊಂದಿದ್ದಾರೆ ಎಂದು ಚೌಧರಿ ಸುದ್ದಿಗಾರರಿಗೆ ತಿಳಿಸಿದರು.
ಶವ ಪತ್ತೆಯಾದ ನಂತರ ಇಬ್ಬರು ಆರೋಪಿಗಳು ಬಂಧನದ ಭೀತಿಯಿಂದ ನಗರದಿಂದ ಪರಾರಿಯಾಗಿದ್ದರು. ಸಿಟಿ ಕ್ರೈಂ ಬ್ರಾಂಚ್ ಬಿಡುಗಡೆ ಮಾಡಿದ ಬಿಡುಗಡೆಯ ಪ್ರಕಾರ, ಸಂತ್ರಸ್ತೆ ತನ್ನ ಮನೆಯಿಂದ ನಾಪತ್ತೆಯಾದ ರಾತ್ರಿ ಆರೋಪಿಗಳಲ್ಲಿ ಒಬ್ಬನೊಂದಿಗೆ ನಡೆದುಕೊಂಡು ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ. ಆಕೆಯನ್ನು ಆರೋಪಿಗಳು ಆಮಿಷವೊಡ್ಡಿ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅಲ್ಲಿ ಇತರರು ಸೇರಿಕೊಂಡು ಪೊದೆಯೊಳಗೆ ಕರೆದೊಯ್ದು ಅತ್ಯಾಚಾರವೆಸಗಿ, ದೊಡ್ಡ ಕಲ್ಲನ್ನು ಬಳಸಿ ಹತ್ಯೆದಿದ್ದಾರೆ ಎಂದು ಹೇಳಲಾಗಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.