ಮಹಾರಾಷ್ಟ್ರದ ಸಿಎಂ ಆಗಿ ಏಕನಾಥ್ ಶಿಂಧೆ, ಡಿಸಿಎಂ ಆಗಿ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ
ಫಡ್ನವೀಸ್ ಮನವೊಲಿಸುವಲ್ಲಿ ಯಶಸ್ವಿಯಾದ ನಡ್ಡಾ!; ಬಾಳಾಸಾಹೇಬ್ ಠಾಕ್ರೆ ಗೆ ಜೈಕಾರ
Team Udayavani, Jun 30, 2022, 8:00 PM IST
ಮುಂಬಯಿ : ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಶಿವಸೇನಾ ನಾಯಕ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್(ಮಾಜಿ ಮುಖ್ಯಮಂತ್ರಿ) ಗುರುವಾರ ಸಂಜೆ 7.30 ಕ್ಕೆ ಪ್ರಮಾಣ ವಚನ ಸ್ವೀಕರಿಸಿದರು
ಫಡ್ನವೀಸ್ ಮಹಾರಾಷ್ಟ್ರದ ಹೊಸ ಸರ್ಕಾರದ ಭಾಗವಾಗಲು ನಿರ್ಧರಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು.
58 ರ ಹರೆಯದ ಮರಾಠ ಸಮುದಾಯದ ಪ್ರಭಾವಿ ನಾಯಕ ಏಕನಾಥ್ ಶಿಂಧೆ ದೇವರ ಹೆಸರಿನಲ್ಲಿ ಮರಾಠಿ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ಬಾಳಾಸಾಹೇಬ್ ಠಾಕ್ರೆ ಗೆ ಜೈಕಾರ
ಪ್ರಮಾಣವಚನದ ವೇಳೆ ರಾಜಭವನದಲ್ಲಿ ಆಮಂತ್ರಿತ ಗಣ್ಯರಿದ್ದರೂ ಬಾಳಾಸಾಹೇಬ್ ಠಾಕ್ರೆ ಅವರಿಗೆ ಜೈಕಾರ ಹಾಕಿದರು. ಶಿಂಧೆ ಪ್ರಮಾಣ ವಚನ ಸ್ವೀಕಾರದ ನಂತರ ಶಿವಸೇನಾ ಪ್ರಮುಖ್ ಬಾಳಾ ಸಾಹೇಬ್ ಠಾಕ್ರೆ , ಶಿವಾಜಿ ಮಹಾರಾಜ್ ಕಿ ಜೈ ಎಂಬ ಘೋಷಣೆಗಳು ಮೊಳಗಿದವು.
ಯಶಸ್ವಿಯಾದ ನಡ್ಡಾ!
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಕೋರಿಕೆಯ ಮೇರೆಗೆ, ದೊಡ್ಡ ಹೃದಯ ವೈಶಾಲ್ಯತೆ ತೋರಿಸಿರುವ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರ ರಾಜ್ಯ ಮತ್ತು ಜನರ ಹಿತಾಸಕ್ತಿಯಿಂದ ಸರ್ಕಾರದ ಭಾಗವಾಗಲು ನಿರ್ಧರಿಸಿದ್ದಾರೆ. ಈ ನಿರ್ಧಾರವು ಮಹಾರಾಷ್ಟ್ರದ ಬಗ್ಗೆ ಅವರ ನಿಜವಾದ ನಿಷ್ಠೆ ಮತ್ತು ಸೇವೆಯ ಸಂಕೇತವಾಗಿದೆ. ಇದಕ್ಕಾಗಿ ನಾನು ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ.ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದರು.
#WATCH | Mumbai: Eknath Shinde takes oath as the Chief Minister of #Maharashtra pic.twitter.com/y6pJs1YeyY
— ANI (@ANI) June 30, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.