Election: ಮಹಾರಾಷ್ಟ್ರದಲ್ಲಿ 20 ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ
Team Udayavani, Oct 16, 2024, 7:33 AM IST
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಕನಿಷ್ಠ 10 ಶಾಸಕರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ತಪ್ಪುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ ಹಾಲಿ ಶಾಸಕರ ವಿರುದ್ಧ ಆಡಳಿತ ವಿರೋಧಿ ಅಲೆ ಇರುವುದು ಗೊತ್ತಾಗಿದೆ. ಹೀಗಾಗಿ, ಟಿಕೆಟ್ ತಪ್ಪುವ ಸಾಧ್ಯತೆಗಳಿವೆ. ಟಿಕೆಟ್ ವಂಚಿತರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಹೈಕಮಾಂಡ್‌ನ ಈ ನಿರ್ಧಾರವು ಪಕ್ಷದೊಳಗೇ ಬಂಡಾಯಕ್ಕೂ ಕಾರಣವಾಗಬಹುದು. ಆಡಳಿತ ವಿರೋಧಿ ಅಲೆಯನ್ನು ತಪ್ಪಿಸುವುದಕ್ಕಾಗಿ ಹಳಬರ ಜಾಗದಲ್ಲಿ ಹೊಸಬರಿಗೆ ಟಿಕೆಟ್ ನೀಡುವ ಪ್ರಯತ್ನ ಮಾಡಲಾಗುತ್ತಿದೆ ಎನ್ನಲಾಗಿದೆ.
2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ 288 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 44 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಚುನಾವಣೆಯಲ್ಲಿ ಹೆಚ್ಚಿನ ಸಾಧನೆಗೆ ಅವಕಾಶವಿರುವುದನ್ನು ಮನಗಂಡಿರುವ ಪಕ್ಷವು ಹೊಸಬರಿಗೆ ಹೆಚ್ಚಿನ ಅವಕಾಶ ನೀಡಲು ಮುಂದಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.