ಓಟಿಗೆ 48ಗಂಟೆಗಳ ಮುಂಚೆ ಪ್ರಣಾಳಿಕೆ ಬಿಡುಗಡೆಗೊಳಿಸುವಂತಿಲ್ಲ
Team Udayavani, Mar 17, 2019, 5:13 AM IST
ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯು ದೇಶಾದ್ಯಂತ ಏಳು ಹಂತಗಳಲ್ಲಿ ನಡೆಯಲಿದೆ. ಚುನಾವಣೆಯಲ್ಲಿ ಮತದಾರರಲ್ಲಿ ಕುತೂಹಲ ಮೂಡಿಸುವುದು ಪ್ರತೀ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳು. ತಮ್ಮ ಪಕ್ಷವು ಗೆದ್ದು ಅಧಿಕಾರಕ್ಕೆ ಬಂದರೆ ಏನೇನೆಲ್ಲಾ ಮಾಡುತ್ತೇವೆ ಎಂಬುದನ್ನು ರಾಜಕೀಯ ಪಕ್ಷಗಳು ತುಸು ಬಣ್ಣ ಬೆರೆಸಿಯೇ ಹೇಳಿರುತ್ತದೆ, ಇದನ್ನೇ ಆಶ್ವಾಸನೆ ಎನ್ನುತ್ತಾರೆ. ಪಕ್ಷಗಳ ಪ್ರಣಾಳಿಕೆಗಳು ಮತದಾನದ ಸಂದರ್ಭದಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳು ಬಹಳವಾಗಿಯೇ ಇರುತ್ತದೆ.
ಈ ಕಾರಣದಿಂದಾಗಿ ಭಾರತೀಯ ಚುನಾವಣಾ ಆಯೋಗವು ಮತದಾನದ 48 ಗಂಟೆಗಳ ಮುಂಚಿತವಾಗಿ ಪ್ರಣಾಳಿಕೆ ಬಿಡುಗಡೆಗೆ ನಿರ್ಬಂಧ ಹೇರಿದೆ. ಈ ಕುರಿತಾಗಿ ಶನಿವಾರ ಪ್ರಕಟನೆಯೊಂದನ್ನು ಹೊರಡಿಸಿರುವ ಆಯೋಗವು ಇದೀಗ ಪ್ರಣಾಳಿಕೆ ಬಿಡುಗಡೆಯನ್ನು ಮಾದರಿ ನೀತಿ ಸಂಹಿತೆಯಡಿಯಲ್ಲಿ ತಂದಿದೆ. ಪಕ್ಷಗಳ ಪ್ರಣಾಳಿಕೆ ಬಿಡುಗಡೆಗೆ ಇದುವರೆಗೂ ಯಾವುದೇ ರೀತಿಯ ಕಾಲಮಿತಿ ನಿರ್ಬಂಧಗಳಿರಲಿಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕ್ರಮವಾಗಿ ಮತದಾನ ನಡೆಯುವ ಎಪ್ರಿಲ್ 11, 18, 23. 29 ಮತ್ತು ಮೇ 6, 12 ಮತ್ತು 19ರಂದು ಅಂತಿಮ 48 ಗಂಟೆಗಳಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಲು ಚುನಾವಣಾ ಆಯೋಗವು ನಿರ್ಬಂಧ ವಿಧಿಸಿದಂತಾಗಿದೆ.
2014ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಪ್ರಥಮ ಹಂತದ ಮತದಾನದ ದಿನವೇ ಬಿಡುಗಡೆಗೊಳಿಸಿತ್ತು ಮತ್ತು ಇದಕ್ಕೆ ಕಾಂಗ್ರೆಸ್ ಆಗ ಆಕ್ಷೇಪ ವ್ಯಕ್ತಪಡಿಸಿತ್ತು. ಮತದಾರರ ಮೇಲೆ ಇದು ಪ್ರಭಾವಬೀರಬಹುದು ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಆದರೆ ನೀತಿ ಸಂಹಿತೆಯಲ್ಲಿ ಇದಕ್ಕೆ ಸಂಬಂಧಿಸಿದ ಯಾವುದೇ ನಿರ್ಬಂಧವಿಲ್ಲದೇ ಇದ್ದ ಕಾರಣ ಆಯೋಗವು ಏನೂ ಮಾಡುವಂತಿರಲಿಲ್ಲ. ಇದಾದ ಬಳಿಕ ಚುನಾವಣಾ ಆಯೋಗವು ರಚಿಸಿದ್ದ ಮಂಡಳಿಯೊಂದರ ವರದಿಯು ರಾಜಕೀಯ ಪಕ್ಷಗಳನ್ನು 72 ಗಂಟೆಗಳ ಮುನ್ನ ಪ್ರಣಾಳಿಕೆ ಬಿಡುಗಡೆ ಮಾಡದಂತೆ ನಿರ್ಬಂಧಿಸಬೇಕು ಎಂದು ವರದಿ ನೀಡಿತ್ತು. ಈ ಪ್ರಸ್ತಾವನೆಗೆ ಕಾಂಗ್ರೆಸ್ ತನ್ನ ವಿರೋಧವನ್ನು ವ್ಯಕ್ತಪಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.