ವಿವಿಪ್ಯಾಟ್ ಸ್ಲಿಪ್ ಹೋಲಿಕೆ; ವಿಪಕ್ಷಗಳ ಬೇಡಿಕೆ ತಿರಸ್ಕರಿಸಿದ ಚುನಾವಣಾ ಆಯೋಗ
Team Udayavani, May 22, 2019, 3:51 PM IST
ನವದೆಹಲಿ: ಲೋಕಸಭಾ ಚುನಾವಣೆಯ ಮತಎಣಿಕೆ ಗುರುವಾರ ಬೆಳಗ್ಗೆ 8ಗಂಟೆಗೆ ಆರಂಭವಾಗಲಿದೆ. ಏತನ್ಮಧ್ಯೆ ನಾಳೆ ಮತಎಣಿಕೆ ನಡೆಸುವ ಮೊದಲು ವಿವಿಪ್ಯಾಟ್ ನ ಮತಚೀಟಿಯನ್ನು ಎಣಿಕೆ ಮಾಡಬೇಕೆಂದು ವಿರೋಧಪಕ್ಷಗಳ ಬೇಡಿಕೆಯನ್ನು ಕೇಂದ್ರ ಚುನಾವಣಾ ಆಯೋಗ ಬುಧವಾರ ತಿರಸ್ಕರಿಸಿದೆ. ವಿವಿ ಪ್ಯಾಟ್ ಸ್ಲಿಪ್ಸ್ ಹೋಲಿಕೆಯ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಚುನಾವಣಾ ಆಯೋಗ ಮತ್ತೆ ಸ್ಪಷ್ಟಪಡಿಸಿದೆ.
21 ರಾಜಕೀಯ ಪಕ್ಷಗಳ ಮುಖಂಡರು ಮಂಗಳವಾರ ಚುನಾವಣಾ ಆಯೋಗವನ್ನು ಭೇಟಿ ಮಾಡಿ, ಮೇ 23ರಂದು ಲೋಕಸಭೆಯ ಚುನಾವಣೆಯ ಫಲಿತಾಂಶದ ಮತಎಣಿಕೆಗೂ ಮುನ್ನ ವಿವಿಪ್ಯಾಟ್ ಮತಚೀಟಿಗಳನ್ನು ಎಣಿಕೆ ಮಾಡಬೇಕೆಂದು ಆಗ್ರಹಿಸಿ ಮನವಿ ನೀಡಿದ್ದವು. ಮೊದಲು ವಿವಿ ಪ್ಯಾಟ್ ಮತದ ಚೀಟಿಯನ್ನು ಹೋಲಿಕೆ ಮಾಡಬೇಕು. ಒಂದು ಕಡೆ ವ್ಯತ್ಯಾಸ ಕಂಡುಬಂದರೂ ಆ ಲೋಕಸಭೆಗೆ ಒಳಪಟ್ಟ ಎಲ್ಲಾ ವಿಧಾನಸಭಾ ಕ್ಷೇತ್ರದ ಎಲ್ಲಾ ವಿವಿಪ್ಯಾಟ್ ಸ್ಲಿಪ್ ಅನ್ನು ಹೋಲಿಕೆ ಮಾಡಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದವು.
ಲೋಕಸಭೆ ಚುನಾವಣೆಯ ಮತಎಣಿಕೆಗೆ ಸಂಬಂಧಿಸಿದಂತೆ ಇದಕ್ಕೂ ಮುನ್ನ ವಿಪಕ್ಷಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಶೇ.50ರಷ್ಟು ವಿವಿ ಪ್ಯಾಟ್ ಮತಗಳನ್ನು ಇವಿಎಂ ಮತಗಳ ಜೊತೆ ಹೋಲಿಕೆ ಮಾಡಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದವು. ಆದರೆ ಸುಪ್ರೀಂಕೋರ್ಟ್ ಪ್ರತಿ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರದ ಪ್ರತಿ 5 ಮತಗಟ್ಟೆಗಳ ವಿವಿಪ್ಯಾಟ್ ಮತದ ಚೀಟಿಗಳನ್ನು ಹೋಲಿಕೆ ಮಾಡಬೇಕೆಂದು ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.