ಮೂರು ಈಶಾನ್ಯ ರಾಜ್ಯಗಳ ಚುನಾವಣೆ ದಿನಾಂಕ ಪ್ರಕಟ
Team Udayavani, Jan 19, 2018, 9:05 AM IST
ಹೊಸದಿಲ್ಲಿ: ಈಶಾನ್ಯ ಭಾರತದ ಮೂರು ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟವಾಗಿದೆ. ತ್ರಿಪುರಾದಲ್ಲಿ ಫೆ.18, ಮೇಘಾಲಯ, ನಾಗಾಲ್ಯಾಂಡ್ ಫೆ.27ಕ್ಕೆ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಮಾ.3ರಂದು ಫಲಿತಾಂಶ ಪ್ರಕಟವಾಗಲಿದೆ. ಮುಖ್ಯ ಚುನಾವಣಾ ಆಯುಕ್ತ ಎ.ಕೆ.ಜ್ಯೋತಿ ಇತರ ಇಬ್ಬರು ಆಯುಕ್ತರ ಜತೆಗೂಡಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಮೇಘಾಲಯ, ನಾಗಾಲ್ಯಾಂಡ್ ಮತ್ತು ತ್ರಿಪುರಾಗಳ ಹಾಲಿ ವಿಧಾನಸಭೆಯ ಅವಧಿ ಕ್ರಮವಾಗಿ ಮಾ.6, 16 ಮತ್ತು 14ರಂದು ಮುಕ್ತಾಯವಾಗಲಿದೆ. ಈ ಮೂರು ರಾಜ್ಯಗಳಲ್ಲಿ ಅಧಿಕಾರಕ್ಕೇರಲು ಬಿಜೆಪಿ ಪ್ರಯತ್ನ ಮಾಡುತ್ತಿದೆ. ತ್ರಿಪುರಾದಲ್ಲಿ ಮಾಣಿಕ್ ಸರ್ಕಾರ್ ನೇತೃತ್ವದ ಸಿಪಿಎಂ ಸರಕಾರ ಐದನೇ ಬಾರಿಗೆ ಅಧಿಕಾರಕ್ಕೇರುವ ಪ್ರಯತ್ನದಲ್ಲಿದೆ. ಮೇಘಾಲಯದಲ್ಲಿ ಕಾಂಗ್ರೆಸ್, ನಾಗಾಲ್ಯಾಂಡ್‌ನಲ್ಲಿ ಎನ್‌ಪಿಎಫ್ ಅಧಿಕಾರದಲ್ಲಿದೆ.
ಇದೇ ವೇಳೆ ಚುನಾವಣ ಬಾಂಡ್ ಬಗ್ಗೆ ಪ್ರತಿಕ್ರಿಯೆ ನೀಡಿದ ಎ.ಕೆ.ಜೋತಿ, ರಾಜಕೀಯ ಬಾಂಡ್‌ಗಳನ್ನು ಜಾರಿ ಮಾಡಿರುವ ಕ್ರಮ ಸರಿಯಾದ ದಿಕ್ಕಿನಲ್ಲಿಯೇ ಇದೆ. ಆದರೆ ಅವುಗಳು ಎಲ್ಲ ಸಮಸ್ಯೆಗಳನ್ನು ನಿವಾರಿಸಲಾರವು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.