ಸಿಕಂದರಾಬಾದ್ :ಎಲೆಕ್ಟ್ರಿಕ್ ಬೈಕ್ ಶೋರೂಮ್ ನಲ್ಲಿ ಅಗ್ನಿ ಅವಘಡ, 7ಮಂದಿ ಸಾವು, ಹಲವರಿಗೆ ಗಾಯ
Team Udayavani, Sep 13, 2022, 7:44 AM IST
ಹೈದರಾಬಾದ್: ಎಲೆಕ್ಟ್ರಿಕ್ ಬೈಕ್ ಶೋರೂಮ್ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 7 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಸಿಕಂದರಾಬಾದ್ ನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ನಾಲ್ಕು ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಎಲೆಕ್ಟ್ರಿಕ್ ಬೈಕ್ ಶೋರೂಮ್ ಇದ್ದು ಇಲ್ಲಿ ಅಗ್ನಿ ಅವಘಡ ಸಂಭವಿಸಿ ಇಡೀ ಕಟ್ಟಡಕ್ಕೆ ಬೆಂಕಿ ಆವರಿಸಿಕೊಂಡಿದೆ ಅಲ್ಲದೆ ಕಟ್ಟಡದ ಮೊದಲ ಮಹಡಿಯಲ್ಲಿ ಹೋಟೆಲ್ ಇದ್ದು ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇದ್ದುದರಿಂದ ಸಾವು ನೋವು ಸಂಭವಿಸಿದೆ.
ಹೈದರಾಬಾದ್ ನಗರ ಪೊಲೀಸ್ ಆಯುಕ್ತ ಸಿ.ವಿ ಆನಂದ್ ಹೇಳಿಕೆಯಂತೆ ಈ ದುರ್ಘಟನೆಯಲ್ಲಿ ಇದುವರೆಗೂ ಮಹಿಳೆಯರು ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವು ಮಂದಿ ಗಾಯಗೊಂಡಿದ್ದು ಅವರನ್ನು ಗಾಂಧಿ ಆಸ್ಪತ್ರೆ ಮತ್ತು ಇತರ ಹತ್ತಿರದ ಖಾಸಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.
ಹೊಟೇಲ್ ನಲ್ಲಿದ್ದ ಅತಿಥಿಗಳಿಗೆ ದಟ್ಟ ಹೊಗೆ ಆವರಿಸಿದ್ದರಿಂದ ಹೆಚ್ಚಿನವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕೆಲವರು ಕಿಟಕಿಯ ಗಾಜುಗಳನ್ನು ಒಡೆದು ಕೆಳಗೆ ಹಾರಿದ್ದಾರೆ, ಅವರಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇನ್ನು ಕೆಲವರು ಕೊಠಡಿಗಳಲ್ಲಿ ಸಿಲುಕಿದ್ದರು ಅವರನ್ನು ರಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದರು.
ಘಟನೆ ಸಂಭವಿಸಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹೋಟೆಲ್ ನಲ್ಲಿ ಸಿಲುಕಿರುವವರನ್ನು ರಕ್ಷಣೆ ಮಾಡಿದ್ದು ಬೆಂಕಿ ನಂದಿಸಲು ಗಂಟೆಗಳ ಕಾಲ ಹರಸಾಹಸ ಪಡಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.