ತಿರುಪತಿ ದೇಗುಲಕ್ಕೆ ಎಲೆಕ್ಟ್ರಿಕ್ ಕಾರು ಹಿರಿಮೆ
Team Udayavani, Jun 13, 2018, 11:41 AM IST
ತಿರುಮಲ: ಕೋಟ್ಯಂತರ ಭಕ್ತರನ್ನು ಹೊಂದಿರುವ ತಿರುಪತಿ ತಿಮ್ಮಪ್ಪ ದೇವಾಲಯ ಈಗ ಇನ್ನೊಂದು ರೀತಿಯಿಂದ ಸುದ್ದಿಯಾಗಿದೆ. ಆಂಧ್ರ ಪ್ರದೇಶದ ಪ್ರಸಿದ್ಧ ದೇವಸ್ಥಾನ ಈಗ ಎಲೆಕ್ಟ್ರಿಕ್ ಕಾರುಗಳನ್ನು ಸದ್ಬಳಕೆ ಮಾಡಿಕೊಳ್ಳುತ್ತಿರುವ ವಿಶ್ವದ ಮೊದಲ ದೇವಸ್ಥಾನ ಎಂಬ ಹೆಗ್ಗಳಿಕೆಗೆ ಕಾರಣವಾಗಿದೆ.
ಆಂಧ್ರ ಸರಕಾರದ ಇವಿ ನಿಯಮಾವಳಿಯ ಪ್ರಕಾರ ರಾಜ್ಯ ನಿರ್ವಹಣೆಯ ಇಂಧನ ದಕ್ಷತಾ ಸೇವಾ ಕಂಪೆನಿ (ಇಇಎಸ್ಎಲ್) 350 ಎಲೆಕ್ಟ್ರಿಕ್ ಕಾರುಗಳನ್ನು ರಾಜ್ಯಾ ದ್ಯಂತ ಬಳಕೆಗೆ ನೀಡಿದೆ. ತಿರುಪತಿ ದೇವಾಲಯ ನಿರ್ವಹಣೆಗೆಂದು 50 ಕಾರುಗಳನ್ನು ನೀಡಲಾಗಿದ್ದು, ಅಧಿಕಾರಿಗಳು ಉಪಯೋಗ ಪಡೆಯುತ್ತಿದ್ದಾರೆ.
50 ಎಲೆಕ್ಟ್ರಿಕ್ ಕಾರು ಗಳನ್ನು 20,000 ರೂ. ತಿಂಗಳ ಬಾಡಿಗೆಗೆ ಪಡೆದು ಉಪಯೋಗಿಸಿಕೊಳ್ಳಲಾಗುತ್ತಿದೆ. ಇದರ ನಿರ್ವಹಣೆಗೆಂದು 20,000 ರೂ. ಅಧಿಕಾರಿ ಗಳಿಗೆ ನೀಡಲಾಗುತ್ತಿದೆ. ಭಕ್ತಾದಿಗಳು ಇದನ್ನು ಬಳಸಿದರೆ ಪ್ರತಿ ಕಿ.ಮೀ.ಗೆ 2 ರೂ. ಬಾಡಿಗೆ ನೀಡ ಬೇ ಕಾ ಗು ತ್ತದೆ. ಟಾಟಾ ಟಿಗಾರ್ ಮತ್ತು ಮಹೀಂದ್ರಾ ಇ-ವೆರಿಟೋ ಕಾರುಗಳನ್ನು 120 ಕಿ.ಮೀ.ನಷ್ಟು ದೂರ ಕ್ರಮಿಸಲು ಬಳಸಿಕೊಳ್ಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.