ಜಮ್ಮು ಕಾಶ್ಮೀರ: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆಗೈದ ಭದ್ರತಾ ಪಡೆಗಳು
Team Udayavani, Sep 25, 2022, 2:41 PM IST
ಶ್ರೀನಗರ: ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಮಚಿಲ್ ಎಂಬಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಘಟನೆ ರವಿವಾರ ನಡೆದಿದೆ.
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ನ ಟೆಕ್ರಿ ನಾರ್ ಪ್ರದೇಶದಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಎನ್ ಕೌಂಟರ್ ನಡೆದಿದೆ.
ಉಗ್ರರಿಂದ ಎರಡು ಎಕೆ-47 ರೈಫಲ್‌ಗಳು, ಎರಡು ಪಿಸ್ತೂಲ್‌ಗಳು ಮತ್ತು ನಾಲ್ಕು ಹ್ಯಾಂಡ್ ಗ್ರೆನೇಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಯೋತ್ಪಾದಕರ ಗುರುತು ಪತ್ತೆ ಸಾಧ್ಯವಾಗಿಲ್ಲ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಶ್ಮೀರ ವಲಯ ಪೊಲೀಸರು, “ಭಾರತೀಯ ಸೇನೆ ಮತ್ತು ಕುಪ್ವಾರ ಪೊಲೀಸರು ಇಬ್ಬರು ಉಗ್ರರನ್ನು ಕುಪ್ವಾರ ಜಿಲ್ಲೆಯ ಮಚಿಲ್ ನ ಟೆಕ್ರಿ ನಾರ್ ಪ್ರದೇಶದಲ್ಲಿ ಹತ್ಯೆ ಮಾಡಿವೆ. ಹತ್ಯೆಯಾದ ಉಗ್ರರ ಗುರುತು ಪತ್ತೆ ಮಾಡುವ ಕೆಲಸವಾಗುತ್ತಿದೆ. ಎರಡು ಎಕೆ-47 ರೈಫಲ್‌ಗಳು, ಎರಡು ಪಿಸ್ತೂಲ್‌ಗಳು ಮತ್ತು ನಾಲ್ಕು ಹ್ಯಾಂಡ್ ಗ್ರೆನೇಡ್ ಗಳನ್ನು ವಶಕ್ಕೆ ಪಡೆಯಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಉಸಿರಾಟದ ಸಮಸ್ಯೆ; ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಎಸ್.ಎಂ.ಕೃಷ್ಣ
ಸುಮಾರು 10 ದಿನಗಳ ಹಿಂದೆ ಖಚಿತ ಮಾಹಿತಿಯನ್ನು ಆಧರಿಸಿ ಕಾಶ್ಮೀರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿತ್ತು. ಈ ಕಾರ್ಯಾಚರಣೆಯು ಶ್ರೀನಗರದ ನೌಗಾಮ್ ಪ್ರದೇಶದಲ್ಲಿ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.