ಧೈರ್ಯವಿದ್ದರೆ 370ನೇ ವಿಧಿ ಜಾರಿಗೊಳಿಸಿ: ಮೋದಿ

370 ಸವಾಲು

Team Udayavani, Oct 14, 2019, 6:15 AM IST

modi

ಜಲಗಾಂವ್‌/ಲಾತೂರ್‌: “ಧೈರ್ಯವಿದ್ದರೆ ರದ್ದು ಮಾಡಲಾಗಿರುವ ಸಂವಿಧಾನದ 370ನೇ ವಿಧಿಯನ್ನು ಮತ್ತೆ ಜಾರಿ ಮಾಡುತ್ತೇವೆ ಎಂದು ಹೇಳಿ, ಈ ಬಗ್ಗೆ ನಿಮ್ಮ ಪ್ರಣಾಳಿಕೆಯಲ್ಲಿ ಸೇರಿಸಿ’
– ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಮತ್ತು ಎನ್‌ಸಿಪಿ ನಾಯಕರಿಗೆ ಸವಾಲು ಹಾಕಿದರು. ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಯುಕ್ತ ಜಲಗಾಂವ್‌ನಲ್ಲಿ ರವಿವಾರ ರ್ಯಾಲಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಎನ್ನುವುದು ನಮಗೆ ಕೇವಲ ಭೂಮಿಯ ಭಾಗ ಮಾತ್ರ ಅಲ್ಲ. ನಮಗೆ ಅದು ದೇಶದ ಕಿರೀಟವೇ ಆಗಿದೆ ಎಂದು ಹೇಳಿದರು.

ಕಣಿವೆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದು ಮಾಡಿದ ವಿಚಾರದ ಬಗ್ಗೆ ವಿಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಪ್ರಧಾನಿ ಮೋದಿ ಟೀಕಿಸಿದರು. 40 ವರ್ಷಗಳ ಅವಧಿಯಲ್ಲಿ ಹದಗೆಟ್ಟಿದ್ದ ಪರಿಸ್ಥಿತಿಯನ್ನು ನಾಲ್ಕು ತಿಂಗಳುಗಳಲ್ಲಿ ಯಥಾಸ್ಥಿತಿಗೆ ತರುತ್ತೇವೆ ಎಂದು ಘೋಷಣೆ ಮಾಡಿದರು ನರೇಂದ್ರ ಮೋದಿ.

ಪಾಕಿಸ್ಥಾನದ ಭಾಷೆ
ವಿಶೇಷ ಸ್ಥಾನಮಾನ ರದ್ದು ಮಾಡಿದ್ದಕ್ಕೆ ಕಾಂಗ್ರೆಸ್‌ ಮತ್ತು ಎನ್‌ಸಿಪಿ ನಾಯಕರು ಪಾಕಿ ಸ್ಥಾನದ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ. ಕೇಂದ್ರ ಸರಕಾರದ ನಿರ್ಧಾರಕ್ಕೆ ಆ ಎರಡು ಪಕ್ಷಗಳ ನಾಯಕರು ಬೆಂಬಲ ನೀಡಲೇ ಇಲ್ಲ ಎಂದು ವಾಗ್ಧಾಳಿ ನಡೆಸಿದರು ಪ್ರಧಾನಿ.

“ಜಮ್ಮು ಮತ್ತು ಕಾಶ್ಮೀರ ವಿಚಾರದ ನಿಟ್ಟಿನಲ್ಲಿ ಎರಡೂ ಪಕ್ಷಗಳು ಮೊಸಳೆ ಕಣ್ಣೀರು ಹರಿಸುವುದನ್ನು ಬಿಟ್ಟು ನಿಜವಾದ ನಿಲುವು ಏನು ಎನ್ನುವುದನ್ನು ಆ ಪಕ್ಷಗಳ ನಾಯಕರು ಘೋಷಣೆ ಮಾಡಬೇಕು. ಕೇಂದ್ರ ಸರಕಾರ ಕೈಗೊಂಡ ನಿರ್ಧಾರದಿಂದಾಗಿ ದೇಶದಲ್ಲಿ ಪ್ರತ್ಯೇಕತಾವಾದ ಮತ್ತು ಉಗ್ರವಾದ ಕೊನೆಗೊಳ್ಳಲಿದೆ’ ಎಂದರು ಮೋದಿ. ನಾವು ಕೈಗೊಂಡ ನಿರ್ಧಾರ ಸರಿಯಾಗಿಲ್ಲ ಎಂದಾದರೆ, ರದ್ದಾಗಿರುವ 370ನೇ ವಿಧಿಯನ್ನು ಮತ್ತೆ ಜಾರಿ ಮಾಡುತ್ತೇವೆ ಎಂಬ ಅಂಶವನ್ನು ಕಾಂಗ್ರೆಸ್‌ ಮತ್ತು ಎನ್‌ಸಿಪಿ ನಾಯಕರು ಚುನಾವಣೆಯ ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳಲಿ ಎಂದು ಸವಾಲು ಹಾಕಿದರು.

ಭಾರತ ಬಲವಾಗಿದೆ
ಇಲ್ಲಿನ ಸಾಕೋಲಿಯಲ್ಲಿ ಮತ್ತೂಂದು ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ, ವಿಶ್ವವು ಹಲವು ಸವಾಲುಗಳನ್ನು ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಭಾರತ ಮತ್ತಷ್ಟು ಬಲಯುತವಾಗಿದೆ. ಅಂಥ ಸವಾಲುಗಳನ್ನು ಎದುರಿಸಲಿದೆ ಎಂದಿದ್ದಾರೆ. ತಮ್ಮ ನೇತೃತ್ವದ ಸರಕಾರದ ಅವಧಿಯಲ್ಲಿ ಕೇವಲ ಜನರ ಬೇಡಿಕೆಯನ್ನು ಆಧರಿಸಿ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಹೇಳಿಕೊಂಡಿದ್ದಾರೆ ಮೋದಿ.

ಟಾಪ್ ನ್ಯೂಸ್

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.