ದೆಹಲಿ-NCRನಲ್ಲಿ ಆರೋಗ್ಯ ತುರ್ತುಪರಿಸ್ಥಿತಿ ಘೋಷಣೆ, ನ.5ರವರೆಗೆ ಶಾಲಾ, ಕಾಲೇಜು ಬಂದ್
Team Udayavani, Nov 1, 2019, 3:23 PM IST
ನವದೆಹಲಿ: ಭಾರೀ ಪ್ರಮಾಣದಲ್ಲಿ ವಾಯು ಮಾಲಿನ್ಯ ಹೆಚ್ಚಾದ ಪರಿಣಾಮ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಇಪಿಸಿಎ(ವಾಯು ನಿಯಂತ್ರಣ ಮಂಡಳಿ) ಅಧಿಕಾರಿಗಳು ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ. ನವೆಂಬರ್ 5ರವರೆಗೆ ಎಲ್ಲಾ ಶಾಲೆಗಳಿಗೆ ರಜೆ ನೀಡಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶಗಳಲ್ಲಿ ಕಾಮಗಾರಿ ಚಟುವಟಿಕೆಯನ್ನು ನಿಷೇಧಿಸಿದೆ. ನವೆಂಬರ್ 5ರ ಬೆಳಗ್ಗೆವರೆಗೆ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ತಿಳಿಸಿದೆ.
ವಾಯು ಮಾಲಿನ್ಯ ಇದೀಗ ಅಪಾಯಕಾರಿ ಮಟ್ಟದಲ್ಲಿದ್ದು ಇದು ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿಯ ಸಂದರ್ಭಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರದಂತೆ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಪಿಸಿಎ ವಿವರಿಸಿದೆ.
ವಾಯು ಮಾಲಿನ್ಯ ತೀವ್ರ ಅಪಾಯಕಾರಿ ಮಟ್ಟ ಮೀರಿದೆ. ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಈ ನಿಟ್ಟಿನಲ್ಲಿ ಜನರು ಕೂಡಾ ಮಾಲಿನ್ಯದ ಪ್ರಮಾಣ ಕಡಿಮೆಯಾಗುವವರೆಗೂ ಹೆಚ್ಚಾಗಿ ಹೊರಗೆ ಬಾರದಂತೆ ಎಚ್ಚರಿಕೆ ವಹಿಸಬೇಕೆಂದು ಮನವಿ ಮಾಡಿದೆ. ಅದರಲ್ಲಿಯೂ ಮಕ್ಕಳು, ವಯಸ್ಸಾದವರು ಮತ್ತು ಅನಾರೋಗ್ಯಕ್ಕೀಡಾದವರ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.