ಇಥೆನಾಲ್- ಪೆಟ್ರೋಲ್ ಮಿಶ್ರಣ ಪ್ರಮಾಣ ಹತ್ತು ಪಟ್ಟು ಹೆಚ್ಚಳ: ಪ್ರಧಾನಿ ಮೋದಿ
Team Udayavani, Jul 29, 2022, 7:00 AM IST
ಹಿಮ್ಮತ್‌ನಗರ: ಪೆಟ್ರೋಲ್ ಜತೆಗೆ ಇಥೆನಾಲ್ ಅನ್ನು ಮಿಶ್ರ ಮಾಡುವ ಪ್ರಮಾಣ ಎಂಟು ವರ್ಷಗಳ ಅವಧಿಯಲ್ಲಿ ಹತ್ತು ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಉತ್ತರ ಗುಜರಾತ್‌ನ ಸಬರ್‌ಕಾಂತಾ ಜಿಲ್ಲೆಯ ಹಿಮ್ಮತ್‌ನಗರ ಎಂಬಲ್ಲಿ ಗುಜರಾತ್ ಸಹಕಾರ ಹಾಲು ಒಕ್ಕೂಟ ನಿಯಮಿತದ ಡೈರಿ ಹಾಗೂ ವಿವಿಧ ಯೋಜನೆಗಳಿಗೆ ಗುರುವಾರ ಚಾಲನೆ ನೀಡಿ ಮಾತನಾಡಿದ್ದಾರೆ. 2014ರಲ್ಲಿ 40 ಕೋಟಿ ಲೀಟರ್ ಇಥೆನಾಲ್ ಮಿಶ್ರಣ ಪ್ರಮಾಣ ಸದ್ಯ 400 ಕೋಟಿ ಲೀಟರ್‌ಗಳಿಗೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಕೈಗೊಂಡಿರುವ ಈ ನಿರ್ಧಾರದಿಂದಾಗಿ ರೈತರ ಆದಾಯ ಹೆಚ್ಚಿಸಲೂ ನೆರವಾಗಿದೆ. 2014ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ರೈತರ ಆದಾಯ ಹೆಚ್ಚಿಸಲು ಕ್ರಮ ಕೈಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಗ ಘೋಷಣೆ ಮಾಡಿದ ಕ್ರಮಗಳು ಈಗ ಫಲಿತಾಂಶ ತೋರಲು ಶುರುವಾಗಿವೆ ಎಂದರು.
ಕೃಷಿ ಜತೆಗೆ ಗೋ ಸಾಕಣೆ, ತೋಟಗಾರಿಕೆ, ಮೀನುಗಾರಿಕೆ, ಜೇನು ಸಾಕಣೆಯೂ ಕೂಡ ರೈತರ ಆದಾಯ ದ್ವಿಗುಣಗೊಳಿಸುವಲ್ಲಿ ನೆರವಾಗಿದೆ ಎಂದು ಪ್ರತಿಪಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Maharashtra: ಕಾಂಗ್ರೆಸ್ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು
MUST WATCH
ಹೊಸ ಸೇರ್ಪಡೆ
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.