ಮಾಧ್ಯಮ ಇಂಗ್ಲಿಷ್ ಆಗಿದ್ದರೂ, ಸ್ಥಳೀಯ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದು!
ಯುಜಿಸಿಯಿಂದ ವಿಶ್ವವಿದ್ಯಾಲಯಗಳಿಗೆ ಮಹತ್ವದ ಸೂಚನೆ
Team Udayavani, Apr 20, 2023, 7:20 AM IST
ನವದೆಹಲಿ: ಸಿಎಪಿಎಫ್ (ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು) ಪರೀಕ್ಷೆಗಳನ್ನು ದೇಶದ 13 ಸ್ಥಳೀಯ ಭಾಷೆಗಳಲ್ಲಿ ಬರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಮತ್ತೂಂದು ಮಹತ್ವದ ಬೆಳವಣಿಗೆ ನಡೆದಿದೆ.
ಇದೀಗ ಯುಜಿಸಿ (ವಿಶ್ವವಿದ್ಯಾಲಯ ಅನುದಾನ ಆಯೋಗ) ವಿದ್ಯಾರ್ಥಿಯೊಬ್ಬ ಇಂಗ್ಲಿಷ್ ಮಾಧ್ಯಮದಲ್ಲಿ ಕೋರ್ಸ್ ತೆಗೆದುಕೊಂಡಿದ್ದರೂ, ಪರೀಕ್ಷೆಯನ್ನು ಸ್ಥಳೀಯ ಭಾಷೆಯಲ್ಲಿ ಬರೆಯಲು ಅವಕಾಶ ಕೊಡಬೇಕು ಎಂದು ವಿಶ್ವವಿದ್ಯಾಲಯಗಳಿಗೆ ಸೂಚಿಸಿದೆ. ಇದಕ್ಕಾಗಿಯೇ ಮೌಲ್ಯಮಾಪಕರನ್ನು ವ್ಯವಸ್ಥೆ ಮಾಡಬೇಕು, ಪಠ್ಯಪುಸ್ತಕಗಳನ್ನು ಸಿದ್ಧಪಡಿಸಬೇಕು ಎಂದು ಯುಜಿಸಿ ಮುಖ್ಯಸ್ಥ ಎಂ.ಜಗದೀಶ್ ಕುಮಾರ್ ಹೇಳಿದ್ದಾರೆ. ದೇಶದಲ್ಲಿ ಇಂಗ್ಲಿಷ್ ಭಾಷೆಯ ಒತ್ತಡದ ಪರಿಣಾಮವಾಗಿ ಸ್ಥಳೀಯ ಭಾಷೆಗಳು ಅಳಿವಿನಂಚಿಗೆ ತಲುಪಿರುವ ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರ ಮತ್ತು ಯುಜಿಸಿಗಳು ನೀಡಿರುವ ಈ ಅವಕಾಶ ಮಹತ್ವದ್ದಾಗಿದೆ. ಶಿಕ್ಷಣದಲ್ಲಿ ಸ್ಥಳೀಯ ಭಾಷೆಯನ್ನು ಬಳಸುವುದು, ಅದಕ್ಕೆ ಉತ್ತೇಜನ ನೀಡುವುದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಮುಖ್ಯ ಆದ್ಯತೆಯಾಗಿದೆ. ಮಾತೃಭಾಷೆ, ಸ್ಥಳೀಯ ಭಾಷೆಗಳ ಮಹತ್ವವನ್ನು ನೂತನ ಶಿಕ್ಷಣ ನೀತಿ ಎತ್ತಿ ಹಿಡಿಯುತ್ತದೆ. ಒಮ್ಮೆ ಸ್ಥಳೀಯ ಭಾಷೆಯಲ್ಲಿ ಶಿಕ್ಷಣ ನೀಡಲು ಆರಂಭಿಸಿದರೆ, ನಿಧಾನಕ್ಕೆ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯೂ ಹೆಚ್ಚುತ್ತದೆ ಎಂದು ಜಗದೀಶ್ ಭರವಸೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
MUST WATCH
ಹೊಸ ಸೇರ್ಪಡೆ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.