ಪ್ರತಿಯೊಬ್ಬ ರೈತನೂ ಸತ್ಯಾಗ್ರಹಿ: ಈ ಚಳುವಳಿಯಿಂದ ಅವರ ಹಕ್ಕುಗಳು ಮರಳಿ ಸಿಗುತ್ತವೆ: ರಾಹುಲ್
Team Udayavani, Jan 3, 2021, 9:00 PM IST
ನವದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ನಡೆಸಲಾಗುತ್ತಿರುವ ರೈತ ಚಳುವಳಿಯ ಕುರಿತಾಗಿ ದನಿ ಎತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ‘ರೈತ ಚಳುವಳಿಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ರೈತನೂ ಸತ್ಯಾಗ್ರಹಿ’ ಎಂದು ಹೇಳಿಕೆ ನೀಡಿದ್ದಾರೆ.
ಪಸ್ತುತ ದೆಹಲಿಯಲ್ಲಿ ನಡೆಯುತ್ತಿರುವ ಚಳುವಳಿಯನ್ನು ಬೆಂಬಲಿಸಿರುವ ರಾಹುಲ್, ಈ ಸಂದರ್ಭವನ್ನು ಬ್ರಿಟೀಷರ ಕಾಲದ ಚಂಪಾರಣ್ ಹೋರಾಟಕ್ಕೆ ಹೋಲಿಸಿದ್ದಾರೆ.
ಈ ಕುರಿತು ಹಿಂದಿಯಲ್ಲಿ ಟ್ಟೀಟ್ ಮಾಡಿರುವ ಅವರು, ದೇಶ ಸದ್ಯ ಬ್ರಿಟೀಷರ ಕಾಲದಲ್ಲಿದ್ದ ಚಂಪಾರಣ್ ಹೋರಾಟದ ಪರಿಸ್ಥಿತಿಯಲ್ಲಿದೆ. ಅಂದಿನ ಕಾಲದಲ್ಲಿ ಬ್ರಿಟೀಷರು ಕಂಪನಿ ಬಹಾದ್ದೂರ್ ಗಳಾಗಿದ್ದರು. ಆದರೆ ಈಗ ಪ್ರಧಾನಿ ಮೋದಿ ಮತ್ತವರ ಗೆಳೆಯರು ಬಹಾದ್ದೂರ್ ಗಳಾಗಿದ್ದಾರೆ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ:ಜೈಲಿನಲ್ಲಿದ್ದ ಬಾಲಕಿ ಸಾವು ಪ್ರಕರಣ: ರಸ್ತೆಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ
ಈ ಚಳುವಳಿಯಲ್ಲಿ ರೈತರಿಗೆ ಅವರ ಹಕ್ಕುಗಳು ಮತ್ತೆ ಮರಳಿ ಸಿಗುತ್ತದೆ ಎಂದಿರುವ ರಾಹುಲ್ ಗಾಂಧಿ, 1917 ರಲ್ಲಿ ಬಿಹಾರದ ಚಂಪಾರಣ್ ನಲ್ಲಿ ಆರಂಭಗೊಂಡಿದ್ದ ಕೃಷಿ ಸಮಸ್ಯೆಗಳಿಗೆ ಸಂಬಂಧಿಸಿದ ರೈತರ ಹೋರಾಟವನ್ನು ನೆನಪಿಸಿಕೊಂಡು ಈ ಸತ್ಯಾಗ್ರಹವು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅತ್ಯಂತ ಮಹತ್ವದ ಪಾತ್ರವನ್ನು ವಹಿಸಿತ್ತು. ಇದರ ನೇತೃತ್ವವನ್ನು ಮಹಾತ್ಮಾಗಾಂಧಿ ಅವರು ವಹಿಸಿಕೊಂಡಿದ್ದರು ಎಂದು ಹೇಳಿದರು.
ಪ್ರಸ್ತುತ ರೈತ ಮಸೂದೆಯನ್ನು ವಿರೋಧಿಸಿ ನಡೆಸಲಾಗುತ್ತಿರುವ ಚಳುವಳಿಗೆ ಕಾಂಗ್ರೆಸ್ ಬೆಂಬಲ ಸೂಚಿಸಿದ್ದು, ಈ ಕಾಯ್ದೆಯನ್ನು ರದ್ದುಗೊಳಿಸಬೇಂದು ಕೆಂದ್ರಕ್ಕೆ ಒತ್ತಾಯ ಹೇರಿದೆ.
ಇದನ್ನೂ ಓದಿ:ಕೇಂದ್ರ ಸಚಿವ ಸದಾನಂದ ಗೌಡ ಅಸ್ವಸ್ಥ: ಜೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಶಿಫ್ಟ್ ಗೆ ಸಿದ್ದತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.