ಚಿದುಗೆ ಕಾದಿದೆಯೇ ಫೋರ್ಜರಿ ಉರುಳು?
ನಕಲು ಪ್ರಕರಣದಲ್ಲೂ ತನಿಖೆ: ಸಿಬಿಐ
Team Udayavani, Sep 28, 2019, 5:58 AM IST
ಹೊಸದಿಲ್ಲಿ: ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಇನ್ನೂ ಜಾಮೀನು ಸಿಗದೇ ತಿಹಾರ್ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಪಿ.ಚಿದಂಬರಂಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಫೋರ್ಜರಿ(ನಕಲು) ಪ್ರಕರಣವೊಂದಕ್ಕೆ ಸಂಬಂಧಿಸಿಯೂ ಚಿದಂಬರಂ ವಿರುದ್ಧ ತನಿಖೆ ನಡೆಸುವುದಾಗಿ ಸಿಬಿಐ ಶುಕ್ರವಾರ ದಿಲ್ಲಿ ಹೈಕೋರ್ಟ್‌ಗೆ ತಿಳಿಸಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ವಿಚಾರ ತಿಳಿಸಿದ್ದು, ಚಿದು ವಿರುದ್ಧ ಫೋರ್ಜರಿ ಕೇಸಿಗೆ ಸಂಬಂಧಿಸಿಯೂ ತನಿಖೆ ನಡೆಸುತ್ತಿದ್ದೇವೆ. ಇದು ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆಯಾಗುತ್ತದೆ. ಆದರೆ, ಇಲ್ಲಿ ಶಿಕ್ಷೆಯ ಪ್ರಮಾಣಕ್ಕಿಂತಲೂ ಹೆಚ್ಚಾಗಿ, ಇಂಥ ಅಪರಾಧವು ಆರ್ಥಿಕ ಸ್ಥಿರತೆ, ಆರ್ಥಿಕತೆ, ಸಂಸ್ಥೆಗಳು ಮತ್ತು ಸಮಾಜದ ಮೇಲೆ ಬೀರುವ ಪರಿಣಾಮವನ್ನು ನಾವು ಗಮನಿಸಬೇಕಾ ಗುತ್ತದೆ ಎಂದು ಹೇಳಿದ್ದಾರೆ. ಆದರೆ, ಫೋರ್ಜರಿ ಕೇಸಿನ ಕುರಿತು ಹೆಚ್ಚಿನ ಮಾಹಿತಿ ನೀಡಿಲ್ಲ.
ಇಂದ್ರಾಣಿ ಭೇಟಿ ನಿರಾಕರಣೆ: ಇದೇ ವೇಳೆ, “ನಾನು ಯಾವುದೇ ಹಂತದಲ್ಲೂ ಇಂದ್ರಾಣಿ ಮುಖರ್ಜಿಯನ್ನು ಭೇಟಿ ಯಾಗಿಲ್ಲ’ ಎಂದು ಕೋರ್ಟ್‌ಗೆ ಚಿದಂಬರಂ ತಿಳಿಸಿದ್ದಾರೆ. ಚಿದು ಪರ ವಾದ ಮಂಡಿಸಿದ ವಕೀಲ ಕಪಿಲ್ ಸಿಬಲ್, ಈ ಕುರಿತು ಪೀಟರ್ ಮುಖರ್ಜಿ ನೀಡಿರುವ ಹೇಳಿಕೆಯನ್ನೂ ಉಲ್ಲೇಖೀಸಿದ್ದು “ವಿತ್ತ ಸಚಿವರನ್ನು ಭೇಟಿಯಾದ ನಿಯೋಗದಲ್ಲಿ ಇಂದ್ರಾಣಿ ಇರಲೇ ಇಲ್ಲ’ ಎಂದು ಸ್ವತಃ ಪೀಟರ್ ಅವರೇ ಹೇಳಿಕೆ ನೀಡಿರುವುದನ್ನು ಕೋರ್ಟ್ ಗಮನಕ್ಕೆ ತಂದಿದ್ದಾರೆ. ವಾದ- ಪ್ರತಿವಾದ ಆಲಿಸಿದ ನ್ಯಾಯಾಲಯ, ಚಿದು ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಕಾಯ್ದಿರಿಸಿತು.
ಅಧಿಕಾರಿಗಳ ತನಿಖೆಗೆ ಅನುಮತಿ
ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಚಿದಂಬರಂ ತನಿಖೆ ಎದುರಿಸುತ್ತಿರುವ ನಡುವೆಯೇ, ಐಎನ್‌ಎಕ್ಸ್ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆ ಉತ್ತೇಜನ ಮಂಡಳಿ(ಎಫ್ಐಪಿಬಿ)ಯಿಂದ ಅನುಮತಿ ನೀಡಿದ ಪ್ರಕರಣ ಸಂಬಂಧ ನೀತಿ ಆಯೋಗದ ಮಾಜಿ ಸಿಇಒ ಸಿಂಧುಶ್ರೀ ಖುಲ್ಲರ್ ಮತ್ತು ಇತರೆ ಮೂವರು ಮಾಜಿ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಅದರಂತೆ, ಖುಲ್ಲರ್ ಮಾತ್ರವಲ್ಲದೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆ ಸಚಿವಾಲಯದ ಮಾಜಿ ಕಾರ್ಯದರ್ಶಿ ಅನೂಪ್ ಕೆ.ಪೂಜಾರಿ, ಹಣಕಾಸು ಸಚಿವಾಲಯದ ಅಂದಿನ ನಿರ್ದೇಶಕ ಪ್ರಬೋಧ್ ಸಕ್ಸೇನಾ, ಆರ್ಥಿಕ ವ್ಯವಹಾರಗಳ ಇಲಾಖೆಯ ಮಾಜಿ ಕಾರ್ಯದರ್ಶಿ ರಬೀಂದ್ರ ಪ್ರಸಾದ್ ಅವರೂ ಸಿಬಿಐನಿಂದ ತನಿಖೆ ಎದುರಿಸಬೇಕಾಗಿದೆ. 2007ರಲ್ಲಿ ವಿದೇಶಗಳಿಂದ ದೇಣಿಗೆ ಪಡೆಯಲು ಐಎನ್‌ಎಕ್ಸ್ ಮೀಡಿಯಾಗೆ ಎಫ್ಐಪಿಬಿ ಅನುಮತಿಯನ್ನು ವಿತ್ತ ಸಚಿವಾಲಯ ನೀಡಿತ್ತು. ಆಗ ಚಿದಂಬರಂ ಅವರು ವಿತ್ತ ಸಚಿವರಾಗಿದ್ದರು. ಹೀಗಾಗಿ, ಅನುಮತಿ ನೀಡುವಲ್ಲಿ ಈ ಅಧಿಕಾರಿಗಳ ಪಾತ್ರದ ಕುರಿತು ತನಿಖೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.