ಇವಿಎಂ ತಿರುಚುವಿಕೆ: ಯಾರೂ ಪುರಾವೆ ಕೊಟ್ಟಿಲ್ಲ
Team Udayavani, May 21, 2017, 11:25 AM IST
ಹೊಸದಿಲ್ಲಿ: ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನು ತಿರುಚಲು ಸಾಧ್ಯ ಎಂದು ಆರೋಪಿಸಿರುವ ರಾಜಕೀಯ ಪಕ್ಷಗಳ ಪೈಕಿ ಯಾರೂ ಈವರೆಗೆ ಅದಕ್ಕೆ ಸಂಬಂಧಿಸಿದ ಪುರಾವೆಗಳನ್ನು ಒದಗಿಸಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.
ದಿಲ್ಲಿಯಲ್ಲಿ ಶನಿವಾರ ಇವಿಎಂ ಹಾಗೂ ವಿವಿಪ್ಯಾಟ್‌ಗಳ ಪ್ರಾತ್ಯಕ್ಷಿಕೆ ನಡೆಸಿದ ಸಂದರ್ಭದಲ್ಲಿ ಆಯೋಗ ಈ ವಿಚಾರ ತಿಳಿಸಿದೆ. ಜತೆಗೆ, ಇವಿಎಂಗಳನ್ನು ತಿರುಚಲು ಸಾಧ್ಯವಿಲ್ಲ ಎಂಬ ಮಾತನ್ನು ಪುನರುಚ್ಚರಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ, “ಉತ್ಪಾದನಾ ಹಂತದಲ್ಲೂ ಇವಿಎಂಗಳನ್ನು ತಿರುಚ ಬಹುದು ಎಂಬ ಆರೋಪವನ್ನು ನಾವು ಒಪ್ಪುವುದಿಲ್ಲ. ಏಕೆಂದರೆ, ಆ ಸಮಯದಲ್ಲೇ ಅತ್ಯಂತ ಭದ್ರತಾ ಕ್ರಮಗಳನ್ನು ಕೈಗೊಂಡಿರ ಲಾಗುತ್ತದೆ. ಇವಿಎಂನಲ್ಲಿರುವ ಚಿಪ್ ಒಂದು ಬಾರಿ ಪ್ರೋಗ್ರಾಂ ಮಾಡಲು ಸಾಧ್ಯವಿರುವಂಥದ್ದು ಹಾಗೂ ಅದರಲ್ಲಿ ವೈಫೈ ಚಿಪ್ ಇರುವುದಿಲ್ಲ. ಹೀಗಾಗಿ, ಇವಿಎಂನೊಳಗೆ ಟ್ರೋಜನ್ ಹಾರ್ಸ್ ತುರುಕಲು ಸಾಧ್ಯವಿಲ್ಲ’ ಎಂದಿದ್ದಾರೆ.
ನಮ್ಮ ಇವಿಎಂಗಳು ಉನ್ನತ ತಾಂತ್ರಿಕ ಅಂಶಗಳನ್ನು ಒಳಗೊಂಡಿದ್ದು, ಅವುಗಳ ಇಂಟರ್ನಲ್ ಸರ್ಕ್ನೂಟ್ ಅನ್ನು ಬದಲಿಸಲು ಆಗುವುದಿಲ್ಲ. ಒಟ್ಟಾರೆಯಾಗಿ, ಇವಿಎಂಗಳನ್ನು ತಿರುಚಲು ಸಾಧ್ಯವೇ ಇಲ್ಲ ಎಂದಿದ್ದಾರೆ ಜೈದಿ. ಜತೆಗೆ, ಮತಯಂತ್ರಗಳ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಯೆತ್ತಿದ ಯಾರೂ ಈವರೆಗೆ ಅದಕ್ಕೆ ಸಂಬಂಧಿಸಿದ ಪುರಾವೆಗಳನ್ನು ನಮಗೆ ಒದಗಿಸಿಲ್ಲ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.