ದೇಶದ ಒಳಿತಿಗಾಗಿ ರಾಜ್ಯಸಭಾ ಸದಸ್ಯತ್ವಕ್ಕೆ ಸಮ್ಮತಿ : ಗೊಗೋಯ್ ಸ್ಪಷ್ಟನೆ
Team Udayavani, Mar 18, 2020, 1:25 AM IST
ಗುವಾಹಾಟಿ: ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ನ್ಯಾಯಾಂಗ ಮತ್ತು ಶಾಸಕಾಂಗಗಳು ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದ್ದು, ಇದೇ ಕಾರಣದಿಂದಲೇ ತಾವು ರಾಜ್ಯಸಭಾ ಸದಸ್ಯತ್ವಕ್ಕೆ ಒಪ್ಪಿಗೆ ಸೂಚಿಸಿರುವುದಾಗಿ ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಸ್ಪಷ್ಟಪಡಿಸಿದ್ದಾರೆ.
ನ್ಯಾ| ಗೊಗೋಯ್ ಹಾಗೂ ಕೇಂದ್ರ ಸರಕಾರದ ವಿರುದ್ಧ ವ್ಯಾಪಕ ಟೀಕೆ ಕೇಳಿಬಂದ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ. ‘ನ್ಯಾಯಾಂಗಕ್ಕೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳನ್ನು ಶಾಸಕಾಂಗದ ಗಮನಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ಸಭೆಯಲ್ಲಿ ನನ್ನ ಉಪಸ್ಥಿತಿ ಪ್ರಮುಖ ಪಾತ್ರ ವಹಿಸಲಿದೆ ಎಂಬುದು ನನ್ನ ನಂಬಿಕೆ’ ಎಂದು ಅವರು ತಿಳಿಸಿದ್ದಾರೆ.
ನ್ಯಾ| ಗೊಗೋಯ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿದ ನಿರ್ಧಾರ ಹಾಗೂ ಅವರು ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದಕ್ಕೆ ಕಾಂಗ್ರೆಸ್ ಸೇರಿ ವಿವಿಧ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದೊಂದು ‘ಲಜ್ಜೆಗೆಟ್ಟ ನಿರ್ಧಾರ’ ಎಂದು ಟೀಕಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.