ನಾಳೆ ಗೋವಾ ಸಂಪುಟ ಸೇರುವ ಮಾಜಿ ಕಾಂಗ್ರೆಸ್ ಶಾಸಕ ರಾಣೆ
Team Udayavani, Apr 11, 2017, 3:48 PM IST
ಪಣಜಿ : ಈಚೆಗೆ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಿದ್ದ ಮಾಜಿ ಕಾಂಗ್ರೆಸ್ ಶಾಸಕ ವಿಶ್ವಜಿತ್ ರಾಣೆ ಅವರನ್ನು ನಾಳೆ ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ಅವರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ನಿರೀಕ್ಷೆ ಇದೆ.
ಪರ್ರೀಕರ್ ಅವರು ನಾಳೆ ಇಬ್ಬರನ್ನು ತಮ್ಮ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದಿದ್ದು ಆ ಪೈಕಿ ರಾಣೆ ಒಬ್ಬರೆಂದು ಈಗಲೇ ಗೊತ್ತಾಗಿದೆ. ಆದರೆ ಇನ್ನೊಬ್ಬ ವ್ಯಕ್ತಿ ಯಾರೆಂದು ಇನ್ನೂ ಗೊತ್ತಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಕಳೆದ ಮಾರ್ಚ್ 14ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಪರ್ರೀಕರ್ ಅವರ ಸಂಪುಟದಲ್ಲಿ ಈಗಾಗಲೇ 9 ಮಂದಿ ಸಚಿವರಿದ್ದಾರೆ.
ರಾಣೆ ಅವರು ಕಾಂಗ್ರೆಸ್ ಟಿಕೆಟ್‌ನಲ್ಲಿ ವಾಲ್‌ಪೋಲ್ ಕ್ಷೇತ್ರದಿಂದ ಚುನಾಯಿತರಾಗಿದ್ದರು. ಆದರೆ ಏಕೈಕ ದೊಡ್ಡ ಪಕ್ಷವಾಗಿ ಮೂಡಿಬಂದ ಹೊರತಾಗಯೂ ಸರಕಾರ ರಚಿಸುವಲ್ಲಿ ಕಾಂಗ್ರೆಸ್ ಯಾವುದೇ ತರಾತುರಿ ತೋರಿಸದೆ ಇದ್ದುದರಿಂದ ನಿರಾಶರಾಗಿದ್ದ ರಾಣೆ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.