Road mishap: ಭೀಕರ ಕಾರು ಅಪಘಾತ; ಮಾಜಿ ಶಾಸಕರ ಪತ್ನಿ ಮೃತ್ಯು
Team Udayavani, Jun 13, 2023, 11:50 AM IST
ದೆಹಲಿ: ಕಾರು ಅಪಘಾತದಲ್ಲಿ ಮಾಜಿ ಶಾಸಕರೊಬ್ಬರ ಪತ್ನಿ ಮೃತಪಟ್ಟಿರುವ ಘಟನೆ ಉತ್ತರ ದೆಹಲಿಯ ಕಾಶ್ಮೀರೆ ಗೇಟ್ ಪ್ರದೇಶದಲ್ಲಿ ಸೋಮವಾರ (ಜೂ.12 ರಂದು) ನಡೆದಿರುವುದು ವರದಿಯಾಗಿದೆ.
ಕಾಂಗ್ರೆಸ್ ನ ಮಾಜಿ ಶಾಸಕ ರಾಜೇಶ್ ಲಿಲೋಥಿಯಾ ಅವರ ಪತ್ನಿ ಮಧು ಲಿಲೋಥಿಯಾ ಚಲಾಯಿಸುತ್ತಿದ್ದ ಕಾರಿಗೆ ಮತ್ತೊಂದು ಕಾರು ಢಿಕ್ಕಿ ಹೊಡೆದಿದೆ. ವೇಗದಿಂದ ಬಂದ ಎಸ್‌ಯುವಿ ಕಾರು ಢಿಕ್ಕಿ ಹೊಡೆದ ರಭಸಕ್ಕೆ ಮಧು ಲಿಲೋಥಿಯಾ ಅವರು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಅವರು ಮೃತಪಟ್ಟಿದ್ದಾರೆ.
ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 279 (ಸಾರ್ವಜನಿಕ ಮಾರ್ಗದಲ್ಲಿ ಅಜಾಗರೂಕ ಚಾಲನೆ ಅಥವಾ ಸವಾರಿ) ಮತ್ತು 304 ಎ (ನಿರ್ಲಕ್ಷ್ಯದಿಂದ ಸಾವು) ಅಡಿಯಲ್ಲಿ ಕಾಶ್ಮೀರೆ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬಿಜೆಪಿಯ ಕೆಲ ದೊಡ್ಡ ನಾಯಕರು ಮತ್ತು ಸಿದ್ದರಾಮಯ್ಯ ನಡುವೆ ಒಳ ಒಪ್ಪಂದ: ಪ್ರತಾಪ್ ಸಿಂಹ ಬಾಂಬ್
ಮೊದಲು ಅಪಘಾತವೆಸಗಿ ಕಾರಿನ ಆರೋಪಿ ಪರಾರಿಯಾಗಿದ್ದಾನೆ. ಆ ಬಳಿಕ ಸಿಸಿಟವಿ ದೃಶ್ಯದ ಆಧಾರ ಮೇಲೆ ಬಂಧಿಸಲಾಗಿದೆ. ನ್ಯೂ ಸೀಲಂಪುರದ ನಿವಾಸಿ ಜೈನುಲ್ ಎಂಬಾತನನ್ನು ಬಂಧಿಸಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಉತ್ತರ ವಿಭಾಗದ ಡಿಸಿಪಿ ಸಾಗರ್ ಸಿಂಗ್ ಕಲ್ಸಿ ಪಿಟಿಐಗೆ ತಿಳಿಸಿದ್ದಾರೆ.
#WATCH | Delhi: Madhu Lilothia, wife of former Congress MLA Rajesh Lilothia, died in a road accident today. Her car met with an accident with an SUV. The accused has been arrested and has been identified as Zainul, a resident, of New Seelampur. Prima facie the collision is from… pic.twitter.com/RoRkfoCFgp
— ANI (@ANI) June 12, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.