Baba Siddique: ಕಾಂಗ್ರೆಸ್ ಜತೆಗಿನ 48 ವರ್ಷಗಳ ನಂಟು ತೊರೆದ ಮಾಜಿ ಸಚಿವ ಬಾಬಾ ಸಿದ್ದಿಕ್
Team Udayavani, Feb 8, 2024, 12:33 PM IST
ಮುಂಬಯಿ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರು 48 ವರ್ಷಗಳಿಂದ ಪಕ್ಷದ ಸದಸ್ಯರಾಗಿದ್ದ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದಿಕ್ ಕೆಲವೊಂದು ವಿಚಾರಗಳನ್ನು ಹೇಳದೆ ಇರುವುದು ಒಳಿತು ಎಂದು ಹೇಳಿಕೊಂಡಿದ್ದಾರೆ.
ಈ ಕುರಿತು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ ಮಾಜಿ ರಾಜ್ಯ ಸಚಿವರು, “ನಾನು ಹದಿಹರೆಯದವನಾಗಿದ್ದಾಗ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ ಅಲ್ಲದೆ ಕಾಂಗ್ರೆಸ್ ಜೊತೆ ನನ್ನ 48 ವರ್ಷಗಳ ಮಹತ್ವದ ಪ್ರಯಾಣವಾಗಿದೆ. ಇಂದು ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ತಕ್ಷಣ ರಾಜೀನಾಮೆ ನೀಡುತ್ತೇನೆ. ಎಂದು ಪೋಸ್ಟ್ ಮಾಡಿದ್ದಾರೆ.
“ನಾನು ಹೇಳಲು ಇಚ್ಛಿಸಿದ್ದು ಬಹಳಷ್ಟಿದೆ ಆದರೆ ಕೆಲವು ವಿಷಯಗಳನ್ನು ಹೇಳದೆ ಬಿಡುವುದು ಉತ್ತಮ. ಈ ಪ್ರಯಾಣದ ಭಾಗವಾಗಿರುವ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ.” ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಪಕ್ಷದ ಬಣಕ್ಕೆ ಸಿದ್ದಿಕ್ ಸೇರುವ ನಿರೀಕ್ಷೆಯಿದೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕರು ಹೇಳಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.
ಫೆಬ್ರವರಿ 1 ರಂದು ಪವಾರ್ ಅವರನ್ನು ಭೇಟಿಯಾದ ಸಿದ್ದಿಕ್ ಮತ್ತು ಅವರ ಪುತ್ರ ಜೀಶಾನ್ ಶಾಸಕರಾದ ನಂತರ ಎನ್‌ಸಿಪಿ ನಾಯಕರು ಈ ಊಹಾಪೋಹವನ್ನು ಮಾಡಿದ್ದಾರೆ.
ಸಿದ್ದಿಕ್ ಅವರು 1999, 2004 ಮತ್ತು 2009 ರಲ್ಲಿ ಬಾಂದ್ರಾ ಪಶ್ಚಿಮ ಕ್ಷೇತ್ರದಿಂದ ಮಹಾರಾಷ್ಟ್ರ ವಿಧಾನಸಭೆಗೆ ಆಯ್ಕೆಯಾಗಿದ್ದರು.
ಬಾಂದ್ರಾ ಪಶ್ಚಿಮ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕ್ ಅವರು ಮಾಜಿ ಆಹಾರ ಮತ್ತು ನಾಗರಿಕ ಸರಬರಾಜು ರಾಜ್ಯ ಸಚಿವರಾಗಿದ್ದರು. ಅವರು ಮಹಾರಾಷ್ಟ್ರ ವಸತಿ ಮತ್ತು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮುಂಬೈ ವಿಭಾಗದ ಅಧ್ಯಕ್ಷರೂ ಆಗಿದ್ದರು.
ಇದನ್ನೂ ಓದಿ: Manmohan Singh ಗಾಲಿ ಕುರ್ಚಿಯಲ್ಲಿದ್ದು ಕೆಲಸ ಮಾಡಿದ್ದರು..: ಪ್ರಧಾನಿ ಮೋದಿ ಶ್ಲಾಘನೆ
I joined the Indian National Congress party as a young teenager and it has been a significant journey lasting 48 years. Today I resign from the primary membership of the Indian National Congress Party @INCIndia with immediate effect. There’s a lot I would have liked to express…
— Baba Siddique (@BabaSiddique) February 8, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
MUST WATCH
ಹೊಸ ಸೇರ್ಪಡೆ
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.