ಗುಜರಾತ್ : ಶಾಸಕತ್ವಕ್ಕೆ ರಾಜೀನಾಮೆ ನೀಡಿದ 7 ಕೈ ಶಾಸಕರು
Team Udayavani, Aug 11, 2017, 3:09 PM IST
ಅಹ್ಮದಾಬಾದ್ : ಗುಜರಾತ್ ನಲ್ಲಿ ಈಚೆಗೆ ನಡೆದಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಅಹ್ಮದ್ ಪಟೇಲ್ ವಿರುದ್ಧ ಮತ ಹಾಕಿದ್ದ ಏಳು ಮಂದಿ ಕಾಂಗ್ರೆಸ್ ಶಾಸಕರು ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವಿಧಾನಸಭಾ ಸ್ಪೀಕರ್ ರಮಣ್‌ಲಾಲ್ ವೋರಾ ಹೇಳಿದ್ದಾರೆ. ಈ ಏಳೂ ಮಂದಿ ಶಾಸಕರು ಈಗಿನ್ನು ಬಿಜೆಪಿಗೆ ಸೇರಲಿದ್ದಾರೆ ಎಂದು ತಿಳಿದುಬಂದಿದೆ.
ಮಾಜಿ ವಿಪಕ್ಷ ನಾಯಕ ಶಂಕರ್‌ಸಿಂಗ್ ವಘೇಲಾ ಮತ್ತು ಇತರ ಏಳು ಮಂದಿ ಕಾಂಗ್ರೆಸ್ ಶಾಸಕರು ಆ.8ರ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಕಾರಣಕ್ಕೆ ಪಕ್ಷ ಅವರನ್ನು ಆ.9ರಂದು ಪಕ್ಷದಿಂದ ಉಚ್ಚಾಟಿಸಿತ್ತು.
“ನಿನ್ನೆ ಗುರುವಾರ ರಾತ್ರಿ ಏಳು ಮಂದಿ ಶಾಸಕರು ನನ್ನ ನಿವಾಸಕ್ಕೆ ಬಂದು ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು’ ಎಂದು ವೋರಾ ತಿಳಿಸಿದ್ದಾರೆ.
ಇಬ್ಬರು ಬಂಡುಕೋರ ಶಾಸಕರಾದ ರಾಘವಜೀ ಪಟೇಲ್ ಮತ್ತು ಭೋಲಾಭಾಯಿ ಗೊಹೇಲ್ ಅವರ ಮತಗಳನ್ನು ಅಸಿಂಧು ಮಾಡಲಾಗಿತು. ಇವರು ಕೂಡ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ರಾಜೀನಾಮೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.