ಮುಂಬಯಿನ ಪಾಲ್ಘರ್‌ನಲ್ಲಿ ಭಾರೀ ಸ್ಫೋಟ; ಒಂದು ಸಾವು
Team Udayavani, Aug 17, 2020, 9:13 PM IST
ಮುಂಬಯಿ: ಇಲ್ಲಿನ ಪಾಲ್ಘರ್‌ನಲ್ಲಿ ಸೋಮವಾರ ಸಂಜೆ ದೊಡ್ಡ ಅಪಘಾತ ಸಂಭವಿಸಿದೆ.
ತಾರಾಪುರ ಕೈಗಾರಿಕಾ ಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 3 ಮಂದಿ ಗಾಯಗೊಂಡಿದ್ದಾರೆ ಎಂದು ಪಾಲ್ಘರ್ ಕಲೆಕ್ಟರ್ ಕೈಲಾಶ್ ಶಿಂಧೆ ತಿಳಿಸಿದ್ದಾರೆ.
ಈ ಸ್ಫೋಟದ ಶಬ್ದ ಸಲ್ವಾರ್, ಪಾಠಲ್, ಬೋಯಿಸಾರ್, ತಾರಾಪುರ ಮತ್ತು ಹತ್ತಿರದ ಹಳ್ಳಿಗಳಿಗೆ 10 ಕಿ.ಮೀ ದೂರದಲ್ಲಿ ಕೇಳಿಬಂದಿದೆ. ಕೆಲವು ವರದಿಗಳ ಪ್ರಕಾರ, ಈ ಸ್ಫೋಟದ ನಂತರ ಹಲವಾರು ಕಿಲೋಮೀಟರ್ ಪ್ರದೇಶದಲ್ಲಿ ಅನಿಲ ಸೋರಿಕೆ ಸಂಭವಿಸಿದೆ. ರಾಸಾಯನಿಕ ಕ್ರಿಯೆಯಿಂದಾಗಿ ಕೈಗಾರಿಕಾ ಪ್ರದೇಶದ ಕೆಟಿ ವಲಯದಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
One person killed, three seriously injured in fire at the factory of Nandolia Organic Chemicals: Palghar Collector Kailas Shinde#Maharashtra https://t.co/Y9DfeTcxmQ
— ANI (@ANI) August 17, 2020
ಜನವರಿ ಬಳಿಕ ಎರಡನೇ ಸ್ಫೋಟ
ಜನವರಿಯಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ, 7 ಮಂದಿ ಸಾವನ್ನಪ್ಪಿದ್ದರು. ಈ ವರ್ಷದ ಜನವರಿಯಲ್ಲಿ ಪಾಲ್ಘರ್ ಜಿಲ್ಲೆಯ ಕೊಲ್ವಾಡೆ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ 7 ಜನರು ಸಾವನ್ನಪ್ಪಿ 4 ಜನರು ಗಾಯಗೊಂಡಿದ್ದರು. ರಾಸಾಯನಿಕ ಪರೀಕ್ಷೆಯ ಸಮಯದಲ್ಲಿ ಸ್ಫೋಟ ಸಂಭವಿಸಿತ್ತು. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಕಟ್ಟಡ ಕುಸಿದಿತ್ತು. ಇದರ ಪ್ರತಿಧ್ವನಿಯೂ 15 ಕಿಲೋ ಮೀಟರ್ ದೂರ ಕೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.