ಈಶಾನ್ಯದಲ್ಲಿ ಹೆಚ್ಚುವರಿ ಸೇನೆ?
Team Udayavani, Nov 21, 2021, 6:10 AM IST
ಹೊಸದಿಲ್ಲಿ: ಈಶಾನ್ಯ ರಾಜ್ಯಗಳಲ್ಲಿ ನಕ್ಸಲರ ಉಪಟಳ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಆ ಎಲ್ಲ ರಾಜ್ಯಗಳಲ್ಲಿ ಈ ಹಿಂದೆ ಇದ್ದಂತೆ ಹೆಚ್ಚುವರಿ ಸೇನಾ ತುಕಡಿಗಳನ್ನು ಕಾವಲಿಗೆ ನಿಯೋಜಿಸುವ ಕುರಿತಂತೆ ಕೇಂದ್ರ ಸರಕಾರ ಚಿಂತನೆ ನಡೆಸಿದೆ.
ಇತ್ತೀಚೆಗೆ ಅಸ್ಸಾಂ ರೈಫಲ್ಸ್ ಪಡೆಯ ಕರ್ನಲ್ ವಿಪ್ಲಬ್ ತ್ರಿಪಾಠಿ, ಅವರ ಪತ್ನಿ ಹಾಗೂ 6 ವರ್ಷದ ಪುತ್ರ ಹಾಗೂ ನಾಲ್ವರು ಯೋಧರನ್ನು ಮಣಿಪುರದ ಚುರಾಚಂದ್‌ಪುರ್ ಅರಣ್ಯ ಪ್ರದೇಶದಲ್ಲಿ ಪೀಪಲ್ಸ್ ರೆವಲ್ಯೂಶನರಿ ಪಾರ್ಟಿ ಆಫ್ ಕಾಂಗ್ಲೆàಪಾಕ್ (ಪಿಆರ್‌ಇಪಿಎಕೆ) ಸಂಘಟನೆಗೆ ಸೇರಿದ ತೀವ್ರಗಾಮಿಗಳು ಬಾಂಬ್ ಹಾಗೂ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದರು. ಇದರ ಬೆನ್ನಲ್ಲೇ ಮತ್ತಷ್ಟು ಅಪಹರಣ, ಹಿಂಸೆಯ ಘಟನೆಗಳು ನಡೆದಿವೆ. ಹಾಗಾಗಿ ತೀವ್ರವಾದಿಗಳ ದಾಳಿಗಳನ್ನು ಹಿಮ್ಮೆಟ್ಟಿಸಲು ಹಾಗೂ ಆ ರಾಜ್ಯಗಳ ಅಧಿಕಾರಿಗಳಿಗೆ ಹಾಗೂ ನಾಗರಿಕರಿಗೆ ಸುರಕ್ಷತೆ ನೀಡಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಆ ರಾಜ್ಯಗಳಲ್ಲಿ ಹೆಚ್ಚುವರಿ ಸೇನಾ ಜಮಾವಣೆ ಮಾಡಲು ಕೇಂದ್ರ ಚಿಂತನೆ ನಡೆಸಿದೆ.
ಆರು ರಾಜ್ಯಗಳ ಬಂದ್‌ಗೆ ಮಾವೋವಾದಿಗಳ ಕರೆ:
ಇತ್ತೀಚೆಗೆ, ಮಹಾರಾಷ್ಟ್ರದ ಗಡಿcರೋಲಿಯಲ್ಲಿ ಮಹಾರಾಷ್ಟ್ರ ಪೊಲೀಸ್‌ನ ನಕ್ಸಲ್ ನಿಗ್ರಹ ಪಡೆ ಹಾಗೂ ನಕ್ಸಲರ ನಡುವೆ ನಡೆದಿದ್ದ ಗುಂಡಿನ ಚಕಮಕಿಯಲ್ಲಿ 27 ನಕ್ಸಲರು ಹತ್ಯೆಗೀಡಾದ ಹಿನ್ನೆಲೆಯಲ್ಲಿ ಆರು ರಾಜ್ಯಗಳಲ್ಲಿ ನ. 27ರಂದು ಬಂದ್ ಆಚರಿಸುವಂತೆ ನಿಷೇಧಿತ ಸಿಪಿಎಂ ಸಂಘಟನೆ ಕರೆಕೊಟ್ಟಿದೆ. ಮಡಿದ ನಕ್ಸಲರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮಹಾರಾಷ್ಟ್ರ, ಛತ್ತೀಸ್‌ಗಢ, ಮಧ್ಯಪ್ರದೇಶ, ಆಂಧ್ರಪ್ರದೇಶ, ಒಡಿಶಾ ಹಾಗೂ ತೆಲಂಗಾಣ ರಾಜ್ಯಗಳಲ್ಲಿರುವ ಈ ಸಂಘಟನೆಯ ಘಟಕಗಳು ತಮ್ಮ ರಾಜ್ಯಗಳಲ್ಲಿ ಬಂದ್ ಆಚರಿಸಬೇಕೆಂದು ಕರೆ ನೀಡಿವೆ.
ಯಾವ್ಯಾವ ರಾಜ್ಯಗಳಲ್ಲಿ ಹೆಚ್ಚು ಭದ್ರತೆ?:
ಅಸ್ಸಾಂ, ಮಣಿಪುರ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್ ರಾಜ್ಯಗಳಲ್ಲಿ ತೀವ್ರಗಾಮಿ ಸಂಘಟನೆಗಳ ಹಾವಳಿ ಹೆಚ್ಚಾಗಿರುವುದರಿಂದ ಆ ರಾಜ್ಯಗಳಲ್ಲೇ ಹೆಚ್ಚು ಸೇನೆಯನ್ನು ಜಮಾವಣೆ ಮಾಡಲು ತೀರ್ಮಾನಿಸಲಾಗಿದೆ.
ತೀವ್ರಗಾಮಿ ಸಂಘಟನೆಗಳ್ಯಾವುವು? :
ಸಂಘಟನೆ/ ರಾಜ್ಯ
ಉಲ್ಫಾ /ಅಸ್ಸಾಂ
ಎನ್‌ಎಸ್‌ಸಿಎನ್-ಕೆ (ವೈಎ) /ಅರುಣಾಚಲ ಪ್ರದೇಶ, ನಾಗಾಲ್ಯಾಂಡ್
ಪೀಪಲ್ಸ್ ಲಿಬರೇಶನ್ ಆರ್ಮಿ /ಮಣಿಪುರ
ಪೀಪಲ್ಸ್ ರೆವಲ್ಯೂಶನರಿ ಪಾರ್ಟಿ ಆಫ್ ಕಾಂಗ್ಲೈ ಪಾಕ್ (ಪಿಆರ್‌ಇಪಿಎಕೆ) /ಮಣಿಪುರ
ಕಾಂಗ್ಲೈ ಯವೊಲ್ ಕನ್ನಾ ಲುಪ್ (ಕೆವೈಕೆಎಲ್) /ಮಣಿಪುರ
ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್ / ಮಣಿಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.