ಐದು ಮತ್ತು ಎಂಟನೇ ತರಗತಿಯಲ್ಲಿ ಫೇಲ್ಗೆ ಅವಕಾಶ
Team Udayavani, Jul 23, 2017, 9:25 AM IST
ಕೋಲ್ಕತಾ: ಐದರಿಂದ ಎಂಟನೇ ತರಗತಿವರೆಗೆ ಮಕ್ಕಳನ್ನು ಅನುತ್ತೀರ್ಣ ಮಾಡಲು ಅವಕಾಶ ನೀಡುವ ಬಗ್ಗೆ ಮಸೂದೆ ಮಂಡಿಸುತ್ತೇವೆ ಎಂದಿದ್ದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಅವರು, ಇದೀಗ ಮಾತು ಬದಲಿಸಿದ್ದಾರೆ.
ಕಡ್ಡಾಯ ಶಿಕ್ಷಣ ಹಕ್ಕು ತಿದ್ದುಪಡಿ ಕಾಯ್ದೆ 2017ರ ಸಂಬಂಧ ಲೋಕಸಭೆಯಲ್ಲಿ ಮಾತನಾಡಿದ್ದ ಅವರು, ಫೇಲ್ ಮಾಡುವ ಅವಕಾಶದ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಶನಿವಾರ ಕೋಲ್ಕತಾದಲ್ಲಿ ಮಾತನಾಡಿದ ಅವರು 5 ಮತ್ತು 8ನೇ ತರಗತಿಯಲ್ಲಿ ಮಕ್ಕಳನ್ನು ಫೇಲ್ ಮಾಡುವ ಅವಕಾಶ ನೀಡಲಾಗುತ್ತದೆ ಎಂದಿದ್ದಾರೆ. ಸದ್ಯ ಕಡ್ಡಾಯ ಶಿಕ್ಷಣದ ಹಕ್ಕಿನಲ್ಲಿ ಎಂಟನೇ ತರಗತಿವರೆಗೆ ಯಾವುದೇ ಮಕ್ಕಳನ್ನು ಫೇಲ್ ಮಾಡದಂತೆ ನಿಯಮ ರೂಪಿಸಲಾಗಿದೆ. ಇದಕ್ಕೆ 25ಕ್ಕೂ ಹೆಚ್ಚು ರಾಜ್ಯಗಳು ಆಕ್ಷೇಪವೆತ್ತಿರುವ ಹಿನ್ನೆಲೆಯಲ್ಲಿ 5 ಮತ್ತು 8ನೇ ತರಗತಿ ಯಲ್ಲಿ ಫೇಲ್ ಮಾಡಲು ಅವಕಾಶ ನೀಡಲಾಗುತ್ತದೆ ಎಂದಿದ್ದಾರೆ. ಮಾರ್ಚ್ನಲ್ಲಿ ಫೇಲ್ ಆಗುವ ವಿದ್ಯಾ ರ್ಥಿಗೆ ಮೇನಲ್ಲಿ ಮತ್ತೂಂದು ಪರೀಕ್ಷೆ ನೀಡಲಾಗುತ್ತದೆ ಎಂದೂ ಹೇಳಿದ್ದಾರೆ. ಅಲ್ಲದೆ, ಅಂತಿಮ ನಿರ್ಧಾರ ತೆಗೆದುಕೊಳ್ಳಲು ರಾಜ್ಯ ಸರಕಾರಗಳಿಗೆ ಅಂತಿಮ ಅವಕಾಶ ನೀಡಲಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.