ನಿಷ್ಪ್ರಯೋಜಕ ಪಿಐಎಲ್: ವಕೀಲಗೆ 1 ಲಕ್ಷ ರೂ. ದಂಡ
Team Udayavani, Jul 11, 2017, 10:31 AM IST
ಹೊಸದಿಲ್ಲಿ: ನಿಷ್ಪ್ರಯೋಜಕ ಸಾರ್ವಜನಿಕ ಹಿತಾಸಕ್ತಿ ದಾವೆಗಳನ್ನು ದಾಖಲಿಸಿ, ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ವಕೀಲರೊಬ್ಬರಿಗೆ ಸುಪ್ರೀಂ ಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿದೆ.
ವಕೀಲ ರಾಜ್ ಬಾಲಮ್ ಶರ್ಮಾ ಎಂಬವವರು, ಹಳೆಯ ವಸಾಹತು ಕಾಲದ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆ. ಎಸ್. ಖೇಹರ್ ನೇತೃತ್ವದ ನ್ಯಾಯಪೀಠ, 160 ಪುಟಗಳ ಅರ್ಜಿ ಸಲ್ಲಿಸಿದ್ದೀರಿ, ಅದನ್ನು ಓದಿದರೆ ಏನೊಂದೂ ಅರ್ಥವಾಗುವುದಿಲ್ಲ, ಎರಡೆರಡು ಬಾರಿ ಓದಿದರೂ ಗೊತ್ತಾಗಲಿಲ್ಲ. ವಸಾಹತು ಕಾಲದ ಕಾನೂನು ರದ್ದುಪಡಿಸಬೇಕೆಂದು ಹೇಳಿದ್ದೀರಿ. ಅಂತಹ ಯಾವ ಕಾನೂನಿಂದ ತೊಂದರೆಯಾಗುತ್ತಿದೆ ಹೇಳಿ. ಈ ಅರ್ಜಿಯಲ್ಲಿ ಏನೂ ಕಾಣುತ್ತಿಲ್ಲ ಎಂದು ಖಾರವಾಗಿ ಹೇಳಿತು. ಅಲ್ಲದೇ ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕೆ ದಂಡ ವಿಧಿಸಿತು. ನಾಲ್ಕು ವಾರಗೊಳಗೆ ಈ ದಂಡ ಕಟ್ಟುವಂತೆ ಆದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.